Featured

ರಾಜ್ಯ ಬಿಜೆಪಿಯಿಂದ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿಗೆ ಆಹ್ವಾನ : ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ – Vishwanews24

ರಾಜ್ಯ ಬಿಜೆಪಿಯಿಂದ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿಗೆ ಆಹ್ವಾನ : ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನೇ ದಿನೇ ಕಾವು ಹೆಚ್ಚಾಗ್ತಿದೆ. ಮುಂದಿನ ಎರಡು ತಿಂಗಳು ರಾಜ್ಯ ಬಿಜೆಪಿಗೆ ಮಹತ್ವಪೂರ್ಣ ಕಾಲಾವಧಿಯಾಗಿದೆ.

ಪ್ರಧಾನಿ ಮೋದಿಯವರು ಮುಂದಿನ ಎರಡು ತಿಂಗಳು ಮಹತ್ವದ ರಾಜ್ಯ ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ  ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಯಲ್ಲಿರಲಿದೆ. ಅದಕ್ಕಾಗಿಯೇ ಸಾಲು- ಸಾಲು ಕಾರ್ಯಕ್ರಮಗಳಿಗೆ ಪ್ರಧಾನಿ ಅವರನ್ನೇ ಆಹ್ವಾನಿಸಲಾಗ್ತಿದೆ.

ಪ್ರಧಾನಿಯವರು ಯಾವಾಗ ಭೇಟಿ ನೀಡಿದರೂ ಅಭಿವೃದ್ಧಿಯ ಅಜೆಂಡಾ ಹಿಡಿದುಕೊಂಡೇ ಬರುತ್ತಾರೆ. ಮುಂದುವರಿದ ಭಾಗವಾಗಿ ಜನವರಿ, ಫೆಬ್ರವರಿಯಲ್ಲಿ ಮತ್ತಷ್ಟು ಯೋಜನೆಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ಈ ಅವಧಿಯಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಹಲವು ಜನಪರ, ಜನಪ್ರಿಯ ಯೋಜನೆ, ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.

ಇದೇ ತಿಂಗಳ ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಲಂಬಾಣಿ ಸಮಾಜದ ಫಲಾನುಭವಿಗಳಿಗೆ ಪ್ರಧಾನಿ ಅವರು ಹಕ್ಕು ಪತ್ರ ವಿತರಿಸಲಿದ್ದಾರೆ. ಫೆಬ್ರವರಿ 12ರಂದು ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಿ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ.

ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ-2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ ಅಂತ್ಯದಲ್ಲಿ ಧಾರವಾಡ ಐಐಟಿ ಉದ್ಘಾಟನೆಗೂ ಪ್ರಧಾನಿ ಆಗಮಿಸಲಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್ ಉದ್ಘಾಟನೆಗೂ ಪ್ರಧಾನಿ ಬರುತ್ತಿದ್ದು ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

ಅಭಿವೃದ್ಧಿ ಯೋಜನೆಗಳ ಬಳಿಕ ಮುಂದಿನ ಹಂತದಲ್ಲಿ ಪ್ರಚಾರ ಸಭೆ, ರ‍್ಯಾಲಿ, ರೋಡ್ ಶೋಗಳ ಆಯೋಜನೆಗೆ ಪ್ಲಾನ್ ರೂಪಿಸಲಾಗುತ್ತದೆ. ಈ ಎರಡೂ ಸಂದರ್ಭಗಳಲ್ಲೂ ಪ್ರಖ್ಯಾತ ಮಠ, ದೇವಸ್ಥಾನಗಳಿಗೂ ಭೇಟಿ ಕೊಡಲು ಪ್ರಧಾನಿ ಪ್ಲಾನ್ ಮಾಡ್ಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾಗೋವರೆಗೂ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಭರಾಟೆ ಇರಲಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago