ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ನೋಟಿಸ್‌ಗೆ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಶಿಸ್ತು ಸಮಿತಿಯ ಶೋಕಾಸ್ ನೋಟಿಸ್ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜ್ಯ ಬಿಜೆಪಿಯ ಸ್ಥಿತಿಯ ಬಗ್ಗೆ ಹೈಕಮಾಂಡ್‌ಗೆ ವಿವರ ಸಲ್ಲಿಸುವುದಾಗಿ ಹೇಳಿದ್ದಾರೆ.
ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಹೈಕಮಾಂಡ್ ನೀಡಿರುವ ನೋಟಿಸ್‌ನಲ್ಲಿ, ಯತ್ನಾಳ್ ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು. 10 ದಿನಗಳ ಒಳಗಾಗಿ ಉತ್ತರಿಸಬೇಕು. ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕಮಾಂಡ್ ಹೇಳಿತ್ತು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…