ರಾಯಚೂರು: ಶಾಸಕರ ಅನರ್ಹತೆಗೆ ಸಂಬಂಧಿಸಿ ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟು ಎತ್ತಿ ಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟು ಸ್ಪೀಕರ್ ಆದೇಶ ಎತ್ತಿ ಹಿಡಿದಿದ್ದು, ನೈತಿಕತೆಗೆ ಗೆಲುವು. ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದರು.
ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರಕಾರಕ್ಕೆ ಅಧಿಕಾರದಲ್ಲಿ ಉಳಿಯುವ ನೈತಿಕತೆಯಿಲ್ಲ. ಸ್ಪೀಕರ್ ನಿರ್ಧಾರ ಸರಿ ಎಂಬುದನ್ನು ತೀರ್ಪು ಬಯಲುಗೊಳಿಸಿದೆ. ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ. ಶೀಘ್ರ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರು ನೀಡಲಾಗುವುದು. ಸರಕಾರವನ್ನು ವಜಾಗೊಳಿಸಲು ಒತ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದರು.
ಬಿಜೆಪಿಗೆ ನೈತಿಕತೆಯಿದ್ದರೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದವರು ಒತ್ತಾಯಿಸಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…