Featured

ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ : ಸಿದ್ದರಾಮಯ್ಯ – Vishwanews24

ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ..

ಬೆಂಗಳೂರು: 2023ರ ಏಪ್ರಿಲ್- ಮೇಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. 2024ಕ್ಕೆ ಲೋಕಸಭಾ ಚುನಾವಣೆ ಇದೆ, ಕರ್ನಾಟಕದಲ್ಲಿ 2023ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡಯಲಿದೆ. ಇವುಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್‍ಗಳಿಗೆ, ಮಹಾನಗರ ಪಾಲಿಕೆ ಚುನಾವಣೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನವ ಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ. ಪಕ್ಷ ಬೂತ್ ಮಟ್ಟದಿಂದ ಕೆಪಿಸಿಸಿ ಮಟ್ಟದ ವರೆಗೆ ಸಂಘಟಿತಗೊಂಡರೆ ಚುನಾವಣೆಗಳ ಗೆಲುವು ಕಷ್ಟದ ಕೆಲಸವಲ್ಲ. ಇಂತಹ ಹಲವು ಚುನಾವಣೆಗಳನ್ನು ಯಶಸ್ವಿಯಾಗಿ ಪಕ್ಷ ಈಗಾಗಲೇ ಎದುರಿಸಿದೆ ಎಂದರು.

ಪಕ್ಷವನ್ನು ಬಲಪಡಿಸಲು ಅನೇಕ ಕ್ರಮಗಳನ್ನು ಎಐಸಿಸಿ ಹಾಗೂ ಕೆಪಿಸಿಸಿ ತೆಗೆದುಕೊಳ್ಳಲು ಆರಂಭ ಮಾಡಿದೆ. ಅದರ ಭಾಗವಾಗಿ ಈ ಸಭೆಯೂ ನಡೆಯುತ್ತಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್‍ಗಳಿಗೆ ಚುನಾವಣೆ ನಡೆಸಬೇಕು ಎಂಬ ಆದೇಶವಾಗಿದೆ. ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸರ್ಕಾರದ ಮೀಸಲಾತಿ ಬಗ್ಗೆ ಒಂದು ತೀರ್ಪನ್ನು ನೀಡಿದೆ. ತೀರ್ಪಿನ ಪ್ರಕಾರ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವಾಗ ಒಂದು ನಂಬಿಕಾರ್ಹ ಮಾಹಿತಿ ಇರಬೇಕು ಮತ್ತು ಮೀಸಲಾತಿ ಪ್ರಮಾಣ 50% ಮೀರಬಾರದು ಎಂದು ಹೇಳಿದೆ. ಇದು 2021 ಏಪ್ರಿಲ್‍ನಲ್ಲಿ ನೀಡಿದ ತೀರ್ಪಾಗಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ತೀರ್ಪು ಬಂದ ಮೇಲೆ ಯಾವ ಕ್ರಮ ಕೈಗೊಂಡಿಲ್ಲ, ಇತ್ತೀಚೆಗೆ ಭಕ್ತವತ್ಸಲಂ ಅವರ ಸಮಿತಿ ರಚನೆ ಮಾಡಿದೆ, ಆ ಸಮಿತಿ ಇನ್ನು ವರದಿ ನೀಡಿಲ್ಲ. ಹತ್ತು ವಾರದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ. ನಮ್ಮ ಪಕ್ಷವು ಸರ್ವ ಪಕ್ಷ ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಬಾರದು ಎಂದು ಹೇಳಿದೆ. ಹಿಂದುಳಿದ ಜಾತಿಗಳಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್ ಗಾಂಧಿ ಅವರು ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ಮಾಡಿದ ನಂತರ. ಮಹಿಳೆಯರಿಗೆ 50%, ಹಿಂದುಳಿದ ಜಾತಿಗಳಿಗೆ 33% ಮೀಸಲಾತಿ ನೀಡಿದ್ದು. ಇದರಲ್ಲಿ ಅಲ್ಪಸಂಖ್ಯಾತರು ಹಾಗೂ ಇನ್ನಿತರೆ ಜಾತಿಗಳು ಸೇರುತ್ತವೆ. ಕಾಂಗ್ರೆಸ್ ಪಕ್ಷ ರಾಜಕೀಯ ಮೀಸಲಾತಿ ನೀಡಿದ್ದು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ನುಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago