ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ : ಸುನಿಲ್ ಕುಮಾರ್ – Vishwanews24
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ : ಸುನಿಲ್ ಕುಮಾರ್ – Vishwanews24
ಮಂಗಳೂರು : ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಇಂದನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಅಮೃತಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಿಂಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ರದ್ದುಪಡಿಸಲಾಗಿದೆ ಎನ್ನುವ ಮಾಹಿತಿ ಎಲ್ಲಾ ಕಡೆಗಳಲ್ಲೂ ಹರಿದಾಡುತ್ತಿದ್ದು, ಇದು ತಪ್ಪು ಮಾಹಿತಿ ಎಂದ ಅವರು ಯೋಜನೆಯನ್ನು ಪಡೆದುಕೊಳ್ಳಲು ಕೆಲವೊಂದು ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಈ ನಿಯಮಾವಳಿಗಳನ್ನು ಅನುಸರಿಸಲು ತೊಂದರೆಯಾಗುತ್ತಿದೆ. ಈ ಕಾರಣಕ್ಕಾಗಿ ನಿಯಮಾವಳಿಗಳನ್ನು ರದ್ದುಪಡಿಸಲಾಗಿದೆಯೇ ಹೊರತು ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಐಪಿಎಲ್ ಮತ್ತು ದೇಶಿ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಸುರೇಶ್ ರೈನಾ – Vishwanews24
