ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಯಾವತ್ತೂ ಹಿಂದುಳಿದ ಶ್ರಮಜೀವಿಗಳಾದ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ಸರಕಾರ ಇದ್ದ ಪ್ರತಿ ಸಂದರ್ಭದಲ್ಲೂ ನಮ್ಮ ಸಮಾಜದ ಅಭಿವೃದ್ಧಿಗಾಗಿ ಕೈಗೊಂಡ ಜನಪರ ಕಾರ್ಯಕ್ರಮ ನಮ್ಮ ಮುಂದೆ ಇದೆ ಎಂದು ಮೊಗವೀರ ಸಮುದಾಯದ ಯುವ ಮುಖಂಡ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಕಿರಣ್ ಕುಮಾರ್ ಉದ್ಯಾವರ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಮತ್ತು ಕಾಪು ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮೊಗವೀರ ಬಾಂಧವರಿದ್ದು, ಇದೇ ಸರಕಾರದಲ್ಲಿ ಈ ಹಿಂದೆ ಕಾಪು ಶ್ರೀ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವಕ್ಕೆ ಬಂದಾಗ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಸಮಾಜದ ಮುಖಂಡರುಗಳ ಅಭಿಪ್ರಾಯದಂತೆ ಶ್ರೀಧರ್ ಕಾಂಚನ್‌ರವರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ, ಆದೇಶ ನೀಡಿದ್ದು ಎಲ್ಲಾ ಸಮಾಜ ಬಾಂಧವರಿಗೂ ತಿಳಿದ ವಿಚಾರವಾಗಿರುತ್ತದೆ. ತದನಂತರ ಶ್ರೀಧರ್ ಕಾಂಚನ್‌ರವರು ಅನಾರೋಗ್ಯದಿಂದ ದೈವಾಧೀನರಾಗಿದ್ದು, ಪ್ರಸ್ತುತ ತೆರವಾದ ಸ್ಥಾನಕ್ಕೆ ಮೊಗವೀರ ಸಮಾಜದ ಸದಸ್ಯರನ್ನು ನಾಮ ನಿರ್ದೇಶನ ಮಾಡಬೇಕಿತ್ತು. ಇದು ನ್ಯಾಯಸಮ್ಮತವಾದ ವಿಚಾರವಾಗಿದೆ. ಹೊಸ ಮಾರಿಗುಡಿಯ ಜೀರ್ಣೋದ್ಧಾರದ ಕಾರ್ಯಕ್ರಮದಲ್ಲಿ ನಮ್ಮ ಸಮಾಜ ಬಾಂಧವರು ಸಕ್ರಿಯವಾಗಿ ಭಾಗವಹಿಸುವುದರ ಜೊತೆಗೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿರುತ್ತೇವೆ. ಆದರೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ತರಾತುರಿಯಲ್ಲಿ ಆಡಳಿತ ಪಕ್ಷದ ಓರ್ವ ವಿಧಾನ ಪರಿಷತ್ ಸದಸ್ಯ ಮೊಗವೀರ ಸಮಾಜದವರಿಗೆ ಸಿಗುವ ಸದಸ್ಯತ್ವವನ್ನು ವಂಚಿಸಿದ ಬಗ್ಗೆ ಇಡೀ ಮೊಗವೀರ ಸಮಾಜವು ಖಂಡಿಸುತ್ತದೆ. ಹೊಸ ಮಾರಿಗುಡಿ ದೇವಸ್ಥಾನವು ಸರಕಾರದ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು ಇದು ಯಾರ ಆಸ್ತಿಯು ಅಲ್ಲ ಎನ್ನುವುದು ಸದಸ್ಯತನಕ್ಕೆ ಕುಮ್ಮಕ್ಕು ನೀಡಿದ ಜನಪ್ರತಿನಿಧಿಗೂ ಹಾಗೂ ಸದಸ್ಯತನ ಆದವರು ತಿಳಿಯುವುದು ಒಳಿತು. ಇದನ್ನು ಸರಿಪಡಿಸಿ ಮೊಗವೀರ ಸಮಾಜಕ್ಕೆ ಅವಕಾಶವನ್ನು ನೀಡಬೇಕಾದುದು ಇವರ ಕರ್ತವ್ಯ. ಅವಕಾಶ ನೀಡದಿದ್ದಲ್ಲಿ ಮುಂದಿನ ಹೋರಾಟವು ಅನಿವಾರ್ಯ ಎಂದು ತಿಳಿಸಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…