Featured

ರಾಜ್ಯ ಸರಕಾರ ವಿರುದ್ಧ ಬಿಜೆಪಿ ಆಹೋರಾತ್ರಿ ಧರಣಿ : ನ್ಯಾಯ ಸಿಗುವವರೆಗೆ ಹೋರಾಟ ಕೈಬಿಡಲ್ಲ : ಬಿಎಸ್​ವೈ-Vishwanews24

ಬೆಂಗಳೂರು; ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಜಿಂದಾಲ್​ ಕಂಪೆನಿಗೆ 3,666 ಎಕರೆ ಭೂಮಿ ಪರಭಾರೆ ಮಾಡಿರುವ ವಿಚಾರವನ್ನು ವಿರೋಧಿಸಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರದಿಂದ ಆರಂಭವಾಗಿರುವ ಆಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಮಾಧ್ಯಮ ಜತೆ ಮಾತನಾಡಿರುವ ಯಡಿಯೂರಪ್ಪ, “ಈ ಮೈತ್ರಿ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಇದೇ ಕಾರಣಕ್ಕೆ ಒಂದೆಡೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್​. ವಿಶ್ವನಾಥ್ ರಾಜೀನಾಮೆ ಕೊಟ್ಟ ಬೆನ್ನಿಗೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡಿದ್ದಾರೆ. ಇದು ಒಂದು ರೀತಿಯ ರಾಜೀನಾಮೆ ಪರ್ವವಾಗಿದ್ದು, ಜಿಂದಾಲ್​ ಕಂಪೆನಿಗೆ ಅಕ್ರಮವಾಗಿ ಭೂಮಿ ಪರಭಾರೆ ಮಾಡಲಾಗಿದೆ. ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈವಾಡವೂ ಇದೆ. ಈ ವಿಚಾರವಾಗಿಯೂ ಶೀಘ್ರದಲ್ಲಿ ಮತ್ತಷ್ಟು ನಾಯಕರ ತಲೆದಂಡವಾಗಲಿದೆ” ಎಂದು ತಿಳಿಸಿದ್ದಾರೆ.

ಏನಿದು ಜಿಂದಾಲ್ ಪ್ರಕರಣ?
ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ ಪ್ರದೇಶದಲ್ಲಿ ಒಟ್ಟಾರೆ 3,666 ಎಕರೆ ಜಮೀನನ್ನು ಜಿಂದಾಲ್ ಉಕ್ಕು ಸಂಸ್ಥೆಗೆ ತೀರಾ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್​ನ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರು ಕೆಲ ದಿನಗಳ ಹಿಂದೆ ಆರೋಪಿಸಿದ್ದರು.
ಸರಕಾರಕ್ಕೆ 2 ಸಾವಿರ ಕೋಟಿಯಷ್ಟು ಹಣ ಬಾಕಿ ಉಳಿಸಿಕೊಂಡಿರುವ ಜಿಂದಾಲ್​ನಂತಹ ಸಂಸ್ಥೆಗೆ ಇಷ್ಟು ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡುವ ಅವಶ್ಯಕತೆ ಏನು? ಹಾಗೆಯೇ, ಜಿಂದಾಲ್ ಸಂಸ್ಥೆ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪವೂ ಇದೆ. ಇಂಥ ಕಂಪನಿಗೆ ವಿನಾಯಿತಿ ನೀಡುವ ಔಚಿತ್ಯವೇನು ಎಂಬುದು ಹೆಚ್.ಕೆ. ಪಾಟೀಲ್ ಪ್ರಶ್ನಿಸಿದ್ದರು.
ಹೆಚ್​.ಕೆ. ಪಾಟೀಲ್ ಪ್ರಶ್ನೆಯಿಂದಾಗಿ ಮುನ್ನಲೆಗೆ ಬಂದ ಈ ವಿಚಾರವನ್ನು ನಂತರ ಬಿಜೆಪಿ ಹೋರಾಟವಾಗಿ ರೂಪಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ “ಜಿಂದಾಲ್ ಸಂಸ್ಥೆಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಿರುವ ಕ್ರಮ ಸರಿಯಲ್ಲ. ಸಚಿವ ಸಂಪುಟದ ಒಪ್ಪಿಗೆಯನ್ನೂ ಪಡೆಯದೆಯೇ ಮಾರಾಟವಾಗಿರುವುದು ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ ಸಿಎಂ ಆದ ಅವಧಿಯಲ್ಲೇ ಇದು ನಡೆದಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ಜಿಂದಾಲ್ ಪ್ರಕರಣದ ಬಗ್ಗೆ ಏನೂ ಮಾತನಾಡುತ್ತಿಲ್ಲ. ಸೇಡಂನಲ್ಲಿ 1,700 ಎಕರೆ ಭೂಮಿ ನೀಡುವುದರ ಹಿಂದೆ ಸಿದ್ದರಾಮಯ್ಯ ಕೈವಾಡ ಏನು ಎಂಬುದು ಗೊತ್ತಾಗಬೇಕು? ಎಂದು ಒತ್ತಾಯಿಸಿ ಆಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago