Featured

ರಾಜ್ಯ ಸರ್ಕಾರದಿಂದ ಐಎಎಸ್, ಐಪಿಎಸ್ ಅಧಿಕಾರಿಗಳ ರಾತ್ರೋ ರಾತ್ರಿ ದಿಢೀರ್ ವರ್ಗಾವಣೆಗೆ ಆದೇಶ – Vishwanews24

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹಲವು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳನ್ನು ರಾತ್ರೋ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ತುಷಾರ್ ಗಿರಿನಾಥ್  ಅವರನ್ನು ಬೆಳಗಾವಿ ವಲಯ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಜತೆಗೆ  ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷರಾಗಿಯೂ ತುಷಾರ್ ಗಿರಿನಾಥ್ ಮುಂದುವರಿಯಲಿದ್ದಾರೆ. ಎಸ್.ಬಿ.ಶೆಟ್ಟಣ್ಣನವರ್ ಅವರನ್ನು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ ಎಂಡಿಯಾಗಿ ನೇಮಕ ಮಾಡಲಾಗಿದೆ.

ಡಾ.ಬಗದಿ ಗೌತಮ್ – ಚಿಕ್ಕಮಗಳೂರು ಜಿಲ್ಲಾಧಿಕಾರಿ, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಎಸ್ ಎಸ್ ನಕುಲ್- ಐಟಿ, ಬಿಟಿ ಬೆಂಗಳೂರು ನಿರ್ದೇಶಕರು, ಎಂ.ಕೆ.ಶ್ರೀರಂಗಯ್ಯ-ಆಯುಕ್ತ, ಉದ್ಯಮಶೀಲತೆ ಮತ್ತು ಜೀವನೋಪಾಯ ವಿಭಾಗ, ಜಿ.ಎನ್.ಶಿವಮೂರ್ತಿ-ದಾವಣಗೆರೆ ಜಿಲ್ಲಾಧಿಕಾರಿ, ಎಸ್.ಅಶ್ವಥಿ- ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಿಇಒ, ಜಿಆರ್ ಜೆ ದಿವ್ಯ ಪ್ರಭು- ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಆಯುಕ್ತ, ಎಚ್.ಬಸವರಾಜೇಂದ್ರ, ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ, ಜಿಸಿ ವೃಷಭೇಂದ್ರ ಮೂರ್ತಿ- ನಿರ್ದೇಶಕರು, ಎಂಎಸ್‌ಎಂಇ- ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೋದ್ಯಮಕ್ಕೆ ನಿರ್ದೇಶಕ, ಡಾ.ಕೆ.ಹರೀಶ್ ಕುಮಾರ್-ಉತ್ತರ ಕನ್ನಡ ಜಿಲ್ಲಾಧಿಕಾರಿ, ಪಾಟೀಲ್ ಯಲಗೌಡ-ಶಿವನಗೌಡ-ವಿಜಯಪುರ ಡಿಸಿ, ಸಿ.ಸತ್ಯಭಾಮ – ಮರಾಜನಗರ ಜಿಲ್ಲಾ ಪಂಚಾಯತ್ ಸಿಇಒ, ಡಾ.ಕೆ.ಎನ್.ವಿಜಯ್ ಪ್ರಕಾಶ್ – ಹಾಸನ ಜಿಲ್ಲಾ ಪಂಚಾಯತ್ ಸಿಇಒ, ಕೆಎಎಸ್ ಅಧಿಕಾರಿ ಜಹೀರಾ ನಸೀಮಾ – ಕಲಬುರಗಿ ಕೆಇಆರ್ ಟಿಸಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ.
ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ, ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಆರು ಐಪಿಎಸ್‌ ಅಧಿಕಾರಿಗಳನ್ನು ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರು ಬೆಂಗಳೂರು ನಗರ ದಕ್ಷಿಣ ವಿಭಾಗಕ್ಕೆ ಬಂದಿದ್ದು, ಅವರಿಂದ ತೆರವಾದ ಹುದ್ದೆಗೆ ಸಿಐಡಿಯಲ್ಲಿದ್ದ ಪ್ರರ್ತಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿ ಹರೀಶ್‌ ಪಾಂಡೆ ವರ್ಗಾವಣೆಗೊಂಡಿದ್ದಾರೆ. ಸಿಸಿಬಿ ಡಿಸಿಪಿ ಜಿನೇಂದ್ರ ಖಣಗಾವಿ ಅವರಿಗೆ ಚನ್ನಪಟ್ಟಣ ಪೊಲೀಸ್‌ ತರಬೇತಿ ಶಾಲೆ ಪ್ರಾಂಶುಪಾಲ ಹುದ್ದೆ ನೀಡಲಾಗಿದೆ.ಹಾಸನದಿಂದ ಎತ್ತಂಗಡಿಗೊಂಡಿದ್ದ ರಾಹುಲ್‌ ಕುಮಾರ್‌ ಶಹಾಪುರವಾಡ್‌ ಅವರಿಗೆ ಬೆಂಗಳೂರು ಪೂರ್ವ ವಿಭಾಗದ ಹೊಣೆಗಾರಿಕೆ ಕೊಡಲಾಗಿದೆ. ಆ ಹುದ್ದೆಯಲ್ಲಿದ್ದ ಅಜಯ್‌ ಹಿಲೋರಿ ಕೆಎಸ್‌ಆರ್‌ಪಿ ಕಾಮಾಂಡೆಟ್‌ ಆಗಿ ನೇಮಕಗೊಂಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago