Featured

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ : ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ – vishwanews24

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ

ಡಿಸೆಂಬರ್‌ನಲ್ಲಿ ಸಿಗಲಿದೆ ಅನ್ನಭಾಗ್ಯದ ಬಾಕಿ ದುಡ್ಡು

9 ಲಕ್ಷ ಅನ್ನಭಾಗ್ಯ ಡಿಬಿಟಿ ವಂಚಿತರಿಗೆ ಸಿಗಲಿದೆ ಹಣ

ಬೆಂಗಳೂರು: ಅನ್ನಭಾಗ್ಯದ ಹಣ ಇದುವರೆಗೆ ರೇಷನ್ ಕಾರ್ಡ್‌ನಲ್ಲಿ  ನಮೂದಾಗಿದ್ದ ಮುಖ್ಯಸ್ಥರಿಗೆ ಬರುತ್ತಿತ್ತು. ಆದ್ರೆ ತಾಂತ್ರಿಕ ದೋಷದಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಿದ್ರು. ಈಗ ಇಲಾಖೆ ಇವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ.

ಅನೇಕರಿಗೆ ಅನ್ನಭಾಗ್ಯದ ದುಡ್ಡು ಖಾತೆಗೆ ಜಮೆಯಾಗಿದ್ರೂ ಕೆಲವು ರೇಷನ್ ಕಾರ್ಡ್‌ನ ಮುಖ್ಯಸ್ಥರಿಗೆ ತಾಂತ್ರಿಕ ದೋಷದಿಂದ ದುಡ್ಡು ಜಮೆಯಾಗಿರಲಿಲ್ಲ. ಹೀಗಾಗಿ ಸರ್ಕಾರದ ಅನುಮತಿ ಪಡೆದು ಆಹಾರ ಇಲಾಖೆ ಮನೆಯ 2ನೇ ಯಜಮಾನರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಹಾಕಲಿದೆ. ಈ ತಿಂಗಳಿಂದಲೇ ಮನೆಯ 2ನೇ ಯಜಮಾನರ ಖಾತೆಗೆ ದುಡ್ಡು ಹೋಗಲಿದೆ.

ಹಾಗಿದ್ರೇ ಈ ಪ್ರಕ್ರಿಯೆ ಹೇಗೆ ನಡೆಯಲಿದೆ ಎಷ್ಟು ಜನರಿಗೆ ಈ ಸೌಲಭ್ಯ ಸಿಗಲಿದೆ ಸಾರ್ವಜನಿಕರು ಏನು ಮಾಡಬೇಕು ವಿವರ ಇಲ್ಲಿದೆ.

ಒಟ್ಟು 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ದುಡ್ಡು ಜಮೆಯಾಗಿಲ್ಲ. ಈ ಫಲಾನುಭವಿಗಳ ರೇಷನ್ ಕಾರ್ಡ್ನಲ್ಲಿದ್ದ ಮನೆಯ ಹಿರಿಯ ಸದಸ್ಯರ ಆಕೌಂಟ್ ನಿಷ್ಕ್ರಿಯ, ಆಧಾರ್ ಸೀಡಿಂಗ್ ಸಮಸ್ಯೆ ಕೆ ವೈಸಿ ಸಮಸ್ಯೆ ಇತ್ತು. ಆದ್ದರಿಂದ ಈ ವಿವರವನ್ನು ಈಗಾಗಲೇ ಆಹಾರ ಇಲಾಖೆ ಕಲೆ ಹಾಕಿದೆ. ಹೀಗಾಗಿ ಈ ತಿಂಗಳಿಂದಲೇ ಬಿಪಿಎಲ್ ಕಾರ್ಡ್ದಾರರ ತಾಂತ್ರಿಕ ದೋಷವಿರುವ ರೇಷನ್ ಕಾರ್ಡ್‌ನ 2ನೇ ಯಜಮಾನರ ಬ್ಯಾಂಕ್ ಖಾತೆಗೆ ದುಡ್ಡು ಜಮೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಾಗಿಲ್ಲ. ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರಲಿದೆ ಎಂದು ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ ತಿಳಿಸಿದ್ದಾರೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago