ಬೆಂಗಳೂರು: ಅನ್ನಭಾಗ್ಯದ ಹಣ ಇದುವರೆಗೆ ರೇಷನ್ ಕಾರ್ಡ್‌ನಲ್ಲಿ ನಮೂದಾಗಿದ್ದ ಮುಖ್ಯಸ್ಥರಿಗೆ ಬರುತ್ತಿತ್ತು. ಆದ್ರೆ ತಾಂತ್ರಿಕ ದೋಷದಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಿದ್ರು. ಈಗ ಇಲಾಖೆ ಇವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ.
ಅನೇಕರಿಗೆ ಅನ್ನಭಾಗ್ಯದ ದುಡ್ಡು ಖಾತೆಗೆ ಜಮೆಯಾಗಿದ್ರೂ ಕೆಲವು ರೇಷನ್ ಕಾರ್ಡ್‌ನ ಮುಖ್ಯಸ್ಥರಿಗೆ ತಾಂತ್ರಿಕ ದೋಷದಿಂದ ದುಡ್ಡು ಜಮೆಯಾಗಿರಲಿಲ್ಲ. ಹೀಗಾಗಿ ಸರ್ಕಾರದ ಅನುಮತಿ ಪಡೆದು ಆಹಾರ ಇಲಾಖೆ ಮನೆಯ 2ನೇ ಯಜಮಾನರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಹಾಕಲಿದೆ. ಈ ತಿಂಗಳಿಂದಲೇ ಮನೆಯ 2ನೇ ಯಜಮಾನರ ಖಾತೆಗೆ ದುಡ್ಡು ಹೋಗಲಿದೆ.
ಹಾಗಿದ್ರೇ ಈ ಪ್ರಕ್ರಿಯೆ ಹೇಗೆ ನಡೆಯಲಿದೆ ಎಷ್ಟು ಜನರಿಗೆ ಈ ಸೌಲಭ್ಯ ಸಿಗಲಿದೆ ಸಾರ್ವಜನಿಕರು ಏನು ಮಾಡಬೇಕು ವಿವರ ಇಲ್ಲಿದೆ.
ಒಟ್ಟು 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ದುಡ್ಡು ಜಮೆಯಾಗಿಲ್ಲ. ಈ ಫಲಾನುಭವಿಗಳ ರೇಷನ್ ಕಾರ್ಡ್ನಲ್ಲಿದ್ದ ಮನೆಯ ಹಿರಿಯ ಸದಸ್ಯರ ಆಕೌಂಟ್ ನಿಷ್ಕ್ರಿಯ, ಆಧಾರ್ ಸೀಡಿಂಗ್ ಸಮಸ್ಯೆ ಕೆ ವೈಸಿ ಸಮಸ್ಯೆ ಇತ್ತು. ಆದ್ದರಿಂದ ಈ ವಿವರವನ್ನು ಈಗಾಗಲೇ ಆಹಾರ ಇಲಾಖೆ ಕಲೆ ಹಾಕಿದೆ. ಹೀಗಾಗಿ ಈ ತಿಂಗಳಿಂದಲೇ ಬಿಪಿಎಲ್ ಕಾರ್ಡ್ದಾರರ ತಾಂತ್ರಿಕ ದೋಷವಿರುವ ರೇಷನ್ ಕಾರ್ಡ್‌ನ 2ನೇ ಯಜಮಾನರ ಬ್ಯಾಂಕ್ ಖಾತೆಗೆ ದುಡ್ಡು ಜಮೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಾಗಿಲ್ಲ. ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರಲಿದೆ ಎಂದು ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ ತಿಳಿಸಿದ್ದಾರೆ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…