ಬೆಂಗಳೂರು : ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ನೀಡಲಾಗುತ್ತಿದ್ದಂತ ನೆರವನ್ನು ರಾಜ್ಯ ಸರ್ಕಾರವು 1.70 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸೋ ನಿರ್ಧಾರವನ್ನು ಕೈಗೊಳ್ಳೋ ಮೂಲಕ, ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಈಗ ಪರಿಶಿಷ್ಟ ಜಾತಿಯ ಬಡ ಕುಟುಂಬದವರಿಗೆ ಮನೆ ಕಟ್ಟೋದಕ್ಕೆ ನೀಡಲಾಗುತ್ತಿರುವಂತ ನೆರವು 1.70 ಲಕ್ಷ ಯಾವುದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ನೆರವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ನೆರವು 5 ಲಕ್ಷಕ್ಕೆ ಹೆಚ್ಚಿಸುವಂತ ಪ್ರಸ್ತಾವನೆಗೆ ಅನುಮತಿ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಆ ಬಳಿಕ, ಮನೆ ಹೆಚ್ಚಳದ ನೆರವಿನ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂದರು.
ಕೊರೋನಾ ಲಾಕ್ ಡೌನ್ ನಂತ್ರದ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು, ರಾಜ್ಯ ಸರ್ಕಾರವು ಒಂದು ವರ್ಷಗಳ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ. ಅನಿವಾರ್ಯವಲ್ಲದಂತ ಯೋಜನೆಗಳನ್ನು ತಡೆ ಹಿಡಿಯಲಾಗುವುದು ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…