ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ ಯೋಜನೆ ಮೂಲಕ ಸೈಕಲ್ ವಿತರಣೆ ಮಾಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸೌಧದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ೫ ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ಮುಂದಾಗಿದೆ.
ಸಂಪುಟ ಸಭೆ ಬಳಿಕ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೃಷ್ಣ ಭೈರೇಗೌಡ ಅವರು, ೧೮೯ ಕೋಟಿ ರೂ. ವೆಚ್ಚದಲ್ಲಿ ೨೦೧೯-೨೦ ನೇ ಸಾಲಿನ ೫ ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಷ್ಟೇ ಅಲ್ಲದೇ ಪೊಲೀಸ್ ಸೇವೆಯಲ್ಲಿ ಮಹಿಳೆಯರ ಪ್ರಮಾಣವನ್ನು ಶೇ. ೨೫ ರಷ್ಟು ಏರಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…