Featured

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಿಎಂ ಬೊಮ್ಮಾಯಿ – Vishwanews24

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು:

ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇ. 2 ರಷ್ಟು ಮೀಸಲು ಕಲ್ಪಿಸುವ ಕಡತಕ್ಕೆ ಸದ್ಯದಲ್ಲೇ ನಾನು ಸಹಿ ಹಾಕುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕ್ರೀಡಾಪಟುಗಳ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರೀಡಾ ಮನೋಭಾವದಿಂದ ಶಿಸ್ತು, ಹೆಚ್ಚಳ ಸಾಧಿಸುವ ಇಚ್ಛಾ ಶಕ್ತಿ ಇರುತ್ತದೆ.

ಶಿಸ್ತಿನಿಂದ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಇದು ಬಹಳ ಮುಖ್ಯ. ನಾನು ಯಾವತ್ತೂ ಹೇಳುತ್ತೇನೆ ಪ್ಲೇ ಟು ವಿನ್, ಪ್ಲೇ ನಾಟ್ ಟು ಲೂಸ್ ಎಂದು. ನೀವು ಯಾವತ್ತೂ ಗೆಲುವಿಗಾಗಿ ಆಡಬೇಕು. ನಿಮ್ಮ ಸಾಧನೆ ನಮಗೆ ಸ್ಫೂರ್ತಿಯಾಗಿದೆ ಎಂದರು.

ನಮ್ಮ ಹುಡುಗರು ಹಾಗೂ ಹುಡುಗಿಯರ ಸಾಮರ್ಥ್ಯ ಬಗ್ಗೆ ನನಗೆ ಬಹಳ ವಿಶ್ವಾಸ ಇತ್ತು. ಅದಕ್ಕೆ ನೀವು ಏನು ಮಾಡಬೇಕು ಎಂಬುದನ್ನು ನೀವು ತಿಳಿದುಕೊಳ್ಳಿ. ನಾವು ನಿಮ್ಮ ಜೊತೆಗಿದ್ದೇವೆ. ಕ್ರೀಡಾಪಟುಗಳಿಗೆ ಭದ್ರತೆ ಬೇಕು. ನೀವು ಸಾಧನೆ ಮಾಡಿದರೆ ಸರ್ಕಾರಕ್ಕೂ ಉತ್ಸಾಹ ಬರುತ್ತದೆ. ಬೇರೆ ಇಲಾಖೆಗಳಲ್ಲೂ ಕ್ರೀಡೆ ಪಟುಗಳಿಗೆ ಉದ್ಯೋಗದಲ್ಲಿ 2% ಮೀಸಲಾತಿ ನೀಡುವ ಕಡತಕ್ಕೆ ಸಹಿ ಹಾಕುತ್ತೇನೆ. ನೌಕರಿಗಾಗಿ ಕ್ರೀಡೆ ಆಡಬೇಡಿ.‌ ನೀವು ಮೊದಲಿಗೆ ದೇಶಕ್ಕಾಗಿ ಆಡಿ. ಗೆಲ್ಲೋದಕ್ಕಾಗಿ ಆಡಿ‌ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ. ನಿಮ್ಮ ಸುರಕ್ಷತೆ ನೋಡುತ್ತದೆ. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದು ವಿವರಿಸಿದರು.

ಕಾಮನ್ವೆಲ್ತ್ ಕೂಟದಲ್ಲಿ ಬೆಳ್ಳಿ ಪದಕ ವಿಜೇತರಾದ ಅಶ್ವಿನಿ ಪೊನ್ನಪ್ಪ ಹಾಗೂ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ತಲಾ 15 ಲಕ್ಷ ನಗದು ಬಹುಮಾನ, ಕಂಚಿನ ಪದಕ ಗೆದ್ದಿರುವ ಗುರುರಾಜ್ ಪೂಜಾರಿ ಅವರಿಗೆ 8 ಲಕ್ಷ ನಗದು ಬಹುಮಾನ ನೀಡಿ ಸಿಎಂ ಅಭಿನಂದನೆ ಸಲ್ಲಿಸಿದರು.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಆಗಸ್ಟ್ 24 ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

3 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

3 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

23 hours ago