Featured

ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ವಸ್ತ್ರ ಕಡ್ಡಾಯ;ಏ.21ರಿಂದ ನಿಯಮ ಜಾರಿಗೆ – vishwanews24

ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ವಸ್ತ್ರ ಕಡ್ಡಾಯ;ಏ.21ರಿಂದ ನಿಯಮ ಜಾರಿಗೆ

ಬೆಂಗಳೂರು: ಜ.29 ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಲಾಖೆಯ ಎಲ್ಲ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಎಂದು ಒಮ್ಮತದಿಂದ ತೀರ್ಮಾನಿಸಲಾಯಿತು.

ಏಪ್ರಿಲ್​ 21, ಸರ್ಕಾರಿ ನೌಕರರ ದಿನಾಚರಣೆಯ ದಿನದಂದೇ ಈ ನಿಯಮವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.

ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ, ತಮ್ಮ ಕರ್ತವ್ಯ ನಿರ್ವಹಿಸಬೇಕು ಎನ್ನಲಾಗಿದ್ದು, ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಲು ಸೂಚಿಸಲಾಗಿದೆ. ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ ಮತ್ತು ನೌಕರರಿಗೆ ಶೇ5ರಷ್ಟು ಹೆಚ್ಚುವರಿ ರಿಯಾಯಿತಿ ನೀಡುವುದರ ಬಗ್ಗೆಯೂ ಪ್ರಸ್ತಾಪಿಸಲಾಯಿತು.

ಡ್ರೆಸ್​ಕೋಡ್​:

  • ಪುರುಷ ನೌಕರರಿಗೆ ಖಾದಿ ಬಟ್ಟೆಯ ಶರ್ಟ್-ಪ್ಯಾಂಟ್ / ಒವರ್ ಕೋಟ್ ಹಾಗೂ ಇತರೆ
  • ಮಹಿಳಾ ನೌಕರರಿಗೆ ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ/ ಚೂಡಿದಾರ್ ಇತ್ಯಾದಿ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago