ಬೆಂಗಳೂರು: ಜ.29 ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಲಾಖೆಯ ಎಲ್ಲ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಎಂದು ಒಮ್ಮತದಿಂದ ತೀರ್ಮಾನಿಸಲಾಯಿತು.
ಏಪ್ರಿಲ್ 21, ಸರ್ಕಾರಿ ನೌಕರರ ದಿನಾಚರಣೆಯ ದಿನದಂದೇ ಈ ನಿಯಮವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.
ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ, ತಮ್ಮ ಕರ್ತವ್ಯ ನಿರ್ವಹಿಸಬೇಕು ಎನ್ನಲಾಗಿದ್ದು, ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಲು ಸೂಚಿಸಲಾಗಿದೆ. ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ ಮತ್ತು ನೌಕರರಿಗೆ ಶೇ5ರಷ್ಟು ಹೆಚ್ಚುವರಿ ರಿಯಾಯಿತಿ ನೀಡುವುದರ ಬಗ್ಗೆಯೂ ಪ್ರಸ್ತಾಪಿಸಲಾಯಿತು.
ಡ್ರೆಸ್ಕೋಡ್:
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…