ಮಂಗಳೂರು,: ನಾಡಿನ ರೈತ ಸಮುದಾಯ ಸೇರಿದಂತೆ ಹೈನುಗಾರರು, ಸಾರ್ವಜನಿ ಕರು ಮತ್ತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ರೂಪಿತವಾದ ಜನಾಭಿಪ್ರಾಯವನ್ನು ಪರಿಗಣಿಸಿ ಭಾಜಪಾ ದ ರಾಜ್ಯ ಕಾರ್ಯಕಾರಿಣಿಯ ನಿರ್ಣಯದಂತೆ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದ ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಈ ಕಾಯ್ದೆಯಿಂದಾಗಿ ಗೋವು ಕಳ್ಳತನ, ಗೋವಿನ ಅನಧಿಕೃತ ಸಾಗಟ ಹಾಗೂ ಅನಧಿಕೃತ ಕಸಾಯಿಖಾನೆ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಮತ್ತು ಸಮಾಜದ ಸಾಮರಸ್ಯ ಕಾಪಾಡುವಲ್ಲಿ ಈ ಮಸೂದೆಯು ಪರಿಣಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಗೋ ಹತ್ಯ ನಿಷೇಧ ಮತ್ತು ಗೋ ಕಳ್ಳ ಸಾಗಣಿಕೆಯ ವಿರುದ್ಧ ಪೊಲೀಸ್ ಇಲಾಖೆಯ ಪ್ರಯತ್ನಗಳಿಗೂ ಈ ಕಾಯ್ದೆ ಇನ್ನಷ್ಟು ಶಕ್ತಿ ತುಂಬಲಿದೆ.
ಭಾರತೀಯ ಜನತಾ ಪಾರ್ಟಿಯ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಗೋ ಹತ್ಯ ನಿಷೇಧ ವಿಧೇಯಕವನ್ನು ಮಂಡಿಸಿದ ರಾಜ್ಯ ಸರ್ಕಾರವನ್ನು, ಹೈನುಗಾರಿಕಾ ಮಂತ್ರಿಗಳಾದ ಶ್ರೀ ಪ್ರಭು ಚಹ್ಹಾನ್‌ರವರನ್ನು ಹಾಗೂ ಕೆಳಮನೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ನೀಡಿದ ಶಾಸಕರನ್ನು ನಾಡಿನ ಜನತೆಯ ಪರವಾಗಿ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಕ್ಯಾಪ್ಟನ್ ಕಾರ್ಣಿಕ್ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…