Featured

ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್ -Vishwanews24

ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್ -Vishwanews24

ಮಂಗಳೂರು,: ನಾಡಿನ ರೈತ ಸಮುದಾಯ ಸೇರಿದಂತೆ ಹೈನುಗಾರರು, ಸಾರ್ವಜನಿ ಕರು ಮತ್ತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ರೂಪಿತವಾದ ಜನಾಭಿಪ್ರಾಯವನ್ನು ಪರಿಗಣಿಸಿ ಭಾಜಪಾ ದ ರಾಜ್ಯ ಕಾರ್ಯಕಾರಿಣಿಯ ನಿರ್ಣಯದಂತೆ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದ ರಾಜ್ಯ ಸರ್ಕಾರ ಗೋ ಹತ್ಯ ನಿಷೇಧ ವಿಧೇಯಕ ಮಂಡಿಸಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಈ ಕಾಯ್ದೆಯಿಂದಾಗಿ ಗೋವು ಕಳ್ಳತನ, ಗೋವಿನ ಅನಧಿಕೃತ ಸಾಗಟ ಹಾಗೂ ಅನಧಿಕೃತ ಕಸಾಯಿಖಾನೆ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಮತ್ತು ಸಮಾಜದ ಸಾಮರಸ್ಯ ಕಾಪಾಡುವಲ್ಲಿ ಈ ಮಸೂದೆಯು ಪರಿಣಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಗೋ ಹತ್ಯ ನಿಷೇಧ ಮತ್ತು ಗೋ ಕಳ್ಳ ಸಾಗಣಿಕೆಯ ವಿರುದ್ಧ ಪೊಲೀಸ್ ಇಲಾಖೆಯ ಪ್ರಯತ್ನಗಳಿಗೂ ಈ ಕಾಯ್ದೆ ಇನ್ನಷ್ಟು ಶಕ್ತಿ ತುಂಬಲಿದೆ.

ಭಾರತೀಯ ಜನತಾ ಪಾರ್ಟಿಯ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಗೋ ಹತ್ಯ ನಿಷೇಧ ವಿಧೇಯಕವನ್ನು ಮಂಡಿಸಿದ ರಾಜ್ಯ ಸರ್ಕಾರವನ್ನು, ಹೈನುಗಾರಿಕಾ ಮಂತ್ರಿಗಳಾದ ಶ್ರೀ ಪ್ರಭು ಚಹ್ಹಾನ್‌ರವರನ್ನು ಹಾಗೂ ಕೆಳಮನೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ನೀಡಿದ ಶಾಸಕರನ್ನು ನಾಡಿನ ಜನತೆಯ ಪರವಾಗಿ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಕ್ಯಾಪ್ಟನ್ ಕಾರ್ಣಿಕ್ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

10 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

18 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

18 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

19 hours ago