ರಾಜ್ಯ ಸರ್ಕಾರ ದಿವಾಳಿಯಾಗಿದೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ರಾಜ್ಯ ಸರ್ಕಾರ ದಿವಾಳಿಯಾಗಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು,: ಬಿಎಸ್‌ ಯಡಿಯೂರಪ್ಪರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಬಿ ಎಸ್‌ ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ” ಎಂದಿದ್ದಾರೆ.

ಹಾಗೆಯೇ, ”ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.