Featured

ರಾಜ್ಯ ಸರ್ಕಾರ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ : ನಕ್ಸಲ್ ಪ್ಯಾಕೇಜ್ ಬಗ್ಗೆ ಸುನೀಲ್ ಕುಮಾರ್ ಮತ್ತೆ ಆಕ್ರೋಶ – vishwanews24

ರಾಜ್ಯ ಸರ್ಕಾರ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ : ನಕ್ಸಲ್ ಪ್ಯಾಕೇಜ್ ಬಗ್ಗೆ ಸುನೀಲ್ ಕುಮಾರ್ ಮತ್ತೆ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಫೇಸ್ ಬುಕ್ ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ಅಮಾಯಕರಿಗೆ ಕ್ಷಮಾದಾನ ನೀಡಲೇಬಾರದು ಎಂಬುದು ನಮ್ಮ ವಾದವಲ್ಲ. ಆದರೆ ಶರಣಾದ ರೀತಿ, ಪ್ಯಾಕೇಜ್ ಘೋಷಣೆ ವಿಧಾನ, ಪ್ರಕರಣ ರದ್ಧತಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಆಕ್ಷೇಪವಿದೆ. ಸಿದ್ದರಾಮಯ್ಯನವರ ಕೋರ್ ಕಮಿಟಿ ಸದಸ್ಯರು ಸಾಮಾಜಿಕ ಜಾಲತಾಣ ದಲ್ಲಿ ಎಷ್ಟೇ ಅರಚಿದರೂ ನಾವು ಹೆದರುವುದಿಲ್ಲ. ಅಷ್ಟಕ್ಕೂ ಬೇಕಾಬಿಟ್ಟಿ ಪ್ಯಾಕೇಜ್ ಘೋಷಿಸುವುದಕ್ಕೆ ರಾಜ್ಯದ ಬೊಕ್ಕಸದ ಹಣ ಯಾರದೋ ಜಮೀನು ನುಂಗಿ- ನೀರು ಕುಡಿದು ಸಂಪಾದಿಸಿದ ಸ್ವಯಾರ್ಜಿತ ಸೈಟಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಶರಣಾಗತಿ ಪ್ರಕ್ರಿಯೆ ಬಗ್ಗೆ ಸಾಕಷ್ಟು ಅನುಮಾನಗಳಿವೆ. ವಿಕ್ರಮ್ ಗೌಡ ಎನ್ ಕೌಂಟರ್ ಬಳಿಕ ಅರ್ಬನ್ ನಕ್ಸಲರು ಶರಣಾಗತಿ ಪ್ರಕ್ರಿಯೆ ಬಗ್ಗೆ ನಡೆಸಿದ ಪ್ರಹಸನದಲ್ಲಿ ಸಿಎಂ ನಿರ್ದೇಶನದ ಭಾಗವೆಷ್ಟು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ. ಒಂದೆಡೆ ನಕ್ಸಲ್ ಶರಣಾಗತಿ ಬಗ್ಗೆ ಮಾತನಾಡುವ ಸರ್ಕಾರ, ಅರಣ್ಯ ವಾಸಿಗಳಿಗ ಪುನರ್ಸತಿ ಬಗ್ಗೆ ಯಾವ ನಿಲುವು ಹೊಂದಿದೆ ಎಂಬುದನ್ನೂ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

51 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago