ರಾಜ್ಯ ಸರ್ಕಾರ ಸಹಕರಿಸಿದರೆ ಪಡುಬಿದ್ರಿ ಎರ್ಮಾಳಿನಲ್ಲಿ ವಿಮಾನ ನಿಲ್ದಾಣ : ಸಂಸದ ಕೋಟ ಮನವಿಗೆ ಸ್ಪಂದಿಸಿ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ – vishwanews24

Featured, ಉಡುಪಿ

ರಾಜ್ಯ ಸರ್ಕಾರ ಸಹಕರಿಸಿದರೆ ಪಡುಬಿದ್ರಿ ಎರ್ಮಾಳಿನಲ್ಲಿ ವಿಮಾನ ನಿಲ್ದಾಣ : ಸಂಸದ ಕೋಟ ಮನವಿಗೆ ಸ್ಪಂದಿಸಿ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ

ಉಡುಪಿ  ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಅವರ ಮನವಿಗೆ ಸ್ಪಂದಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಚಿವರು ಕೋಟ ಶ್ರೀನಿವಾಸ ಪೂಜಾರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: 

ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ – vishwanews24

ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನನ್ನ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಕೋಟ ತಿಳಿಸಿದ್ದಾರೆ.

Leave a Reply