ಉಡುಪಿ ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಅವರ ಮನವಿಗೆ ಸ್ಪಂದಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಚಿವರು ಕೋಟ ಶ್ರೀನಿವಾಸ ಪೂಜಾರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:
ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನನ್ನ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಕೋಟ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…