ಬೆಂಗಳೂರು : ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಾಬ್,ಹಲಾಲ್,ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ‘ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ.
ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.
‘ಭಗವದ್ಗೀತೆ,ಬೈಬಲ್,ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು’ ಎಂದು ಆರೋಪ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…