Featured

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರಿಂದ  ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ – Vishwanews24

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್

ಅವರಿಂದ  ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಧಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಳಕ್ಕೆ ಹಸ್ತಾಂತರಿಸಲಾಯಿತು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ – Vishwanews24

ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಧಿಗೆ 2 ಕೋಟಿ ರೂ.ಗಳನ್ನು ಮಹಾಮಂಡಳದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.

ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಮಹಾಮಂಡಳದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು. ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಿಎಂ ಬೊಮ್ಮಾಯಿ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago