ರಾಜ್ಯ ಸಾರಿಗೆ ನೌಕರರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ :  ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಇಂದೇ ಅಧಿಕೃತ ಆದೇಶ – Vishwanews24

Featured, ರಾಜ್ಯ ನ್ಯೂಸ್

ರಾಜ್ಯ ಸಾರಿಗೆ ನೌಕರರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ :  ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಇಂದೇ ಅಧಿಕೃತ ಆದೇಶ

ಬೆಂಗಳೂರು : ಸಾರಿಗೆ ಇಲಾಖೆಯ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಹೆಚ್ಚಳ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಕೆಪಿಟಿಸಿಎಲ್ ನೌಕರರ ವೇತನ ಶೇ. 20 ರಷ್ಟು ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಶೇ. 15 ರಷ್ಟು ಹೆಚ್ಚಳ ಮಾಡಿ ಇಂದೇ ಅಧಿಕೃತವಾಗಿ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರ ಒಕ್ಕೂಟವು ಇದೇ ಮಾರ್ಚ್ 21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಇದೀಗ ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದೆ.

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ  – Vishwanews24

Leave a Reply