Featured

ರಾತೋರಾತ್ರಿ ಅರ್ಧ ಮುಳುಗಿದ ದೇವಸ್ಥಾನ, ಮನೆ ;ಬಜಪೆ ದೊಡ್ಡಿಕಟ್ಟದ MSEZ ಅಣೆಕಟ್ಟೆ ಒಡೆದು ಸಂಭವಿಸಿದ ಅನಾಹುತ ; ಅಪಾಯದಿಂದ ಪಾರಾದ ಮನೆ ಮಂದಿ ; ಲಕ್ಷಾಂತರ ರೂ. ಮೌಲ್ಯದ ನಷ್ಟ

ಬಜಪೆ: ಇಲ್ಲಿನ ದೊಡ್ಡಿಕಟ್ಟದ ಶ್ರೀ ಸ್ವಯಂ ಭೂಲಿಂಗೇಶ್ವರ ದೇವಸ್ಥಾನದ ಬಳಿ MSEZ ಆವರಣ ಗೋಡೆ ಬಳಿ ತೋಡಿಗೆ ಅಡ್ಡವಾಗಿ ಮಣ್ಣು ಹಾಕಿ ನಿರ್ಮಿಸಿದ್ದ ಕಟ್ಟೆ ಮತ್ತು ರಸ್ತೆ ನೀರಿನ ಒತ್ತಡಕ್ಕೆ ಒಡೆದುಹೋದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಹಠಾತ್‌ ಪ್ರವಾಹದಿಂದ ಸಮೀಪದ ಶ್ರೀ ಸ್ವಯಂ ಭೂಲಿಂಗೇಶ್ವರ ದೇವಸ್ಥಾನ, ಮನೆ ಮಧ್ಯರಾತ್ರಿ ಅರ್ಧಮುಳುಗಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಜಮೀನು, ಕೃಷಿ ಹಾಗೂ ಸೊತ್ತುಗಳಿಗೆ ಅಪಾರ ಹಾನಿ ಉಂಟಾಗಿದೆ. ಪೆರ್ಮುದೆಯ ಮೆನ್ಗಲ್‌ ಪದವಿನಿಂದ ಹರಿಯುವ ದೊಡ್ಡ ತೋಡಿಗೆ ದೊಡ್ಡಿಕಟ್ಟದಲ್ಲಿ MSEZ ವ್ಯಾಪ್ತಿಯ ಒಳಗೆ ಗುಡ್ಡಗಳ ನಡುವೆ ಮಣ್ಣು ತುಂಬಿಸಿ ಅಣೆಕಟ್ಟೆ ನಿರ್ಮಿಸಲಾಗಿತ್ತು. ಹೆಚ್ಚಿನ ನೀರು ಹೊರಕ್ಕೆ ಹರಿಯಲು ಪೈಪು ಅಳವಡಿಸಲಾಗಿತ್ತಾದರೂ ಅವುಗಳಲ್ಲಿ ಹೂಳು ತುಂಬಿತ್ತು. ಇದರಿಂದಾಗಿ ಈ ಬಾರಿ ನೀರು ಸುಮಾರು 40 ಅಡಿಗಳಷ್ಟು ಸಂಗ್ರಹಗೊಂಡಿತ್ತು. ಅಪಾಯ ಇದೆ ಎಂದು MSEZ ಎಂಜಿನಿಯರ್‌ ಗೆ ಸ್ಥಳೀಯರು ಮುನ್ಸೂಚನೆ ನೀಡಿದ್ದರಾದರೂ ಅವರು ಆ ಬಗ್ಗೆ ಗಮನ ಹರಿಸಿರಲಿಲ್ಲ.

1 ಗಂಟೆ ಭೀತಿಯ ವಾತಾವರಣ
ಸುಮಾರು ಒಂದು ತಾಸು ನಾವು ತೀರಾ ಹೆದರಿದ್ದೆವು. ಮರ ಬಿದ್ದು 4-5 ವಿದ್ಯುತ್‌ ಕಂಬಗಳು ಬಿದ್ದಿದ್ದು, ವಿದ್ಯುತ್‌ ಇರಲಿಲ್ಲ. ಮೊಬೈಲ್‌ ಫೋನ್‌ ನೀರಲ್ಲಿ ಎಲ್ಲೋ ಹೋಗಿತ್ತು. ಎಲ್ಲೆಡೆಯಿಂದ ನೀರು ನುಗ್ಗಿದ್ದರಿಂದ ಏನೂ ಮಾಡಲಾರದ ಸ್ಥಿತಿ ಇತ್ತು. ಸುಮಾರು ಅರ್ಧ ಗಂಟೆಯ ಬಳಿಕ ನೀರು ಇಳಿಯಲಾರಂಭಿಸಿತು. ನಾವು ಮಂಚದ ಮೇಲೆ ನಿಂತಿದ್ದರೂ ಎದೆಮಟ್ಟ ನೀರು ಬಂದಿತ್ತು. ಬದುಕಿದ್ದೇ ಹೆಚ್ಚು ಎಂದು ಹಾನಿಗೀಡಾದ ಮನೆಯ ಮಾಲಕ ಮಾಧವ ಅಮೀನ್‌ ವಿವರಿಸಿದರು.

ನೀರು ನುಗ್ಗುವ ರಭಸಕ್ಕೆ ಹಲವು ಮರಗಳು ಧರಾಶಾಯಿಯಾಗಿದ್ದವು. ಅಡಿಕೆ ಮರ ಮನೆಗೆ ನುಗ್ಗುವ ಮಟ್ಟಕ್ಕೆ ಬಂದಿತ್ತು. ಮನೆಯ ಹೊರಾಂಗಣದಲ್ಲಿದ್ದ ಸೋಪಾ ಛಾವಣಿಗೆ ಸಿಲುಕಿದೆ. ಕುರ್ಚಿ, ಮೇಜು ಇನ್ನೂ ಪತ್ತೆಯಾಗಿಲ್ಲ. ದೈವಸ್ಥಾನದ ಕಾಣಿಕೆ ಡಬ್ಬಿ, ಕುರ್ಚಿ, ಮೇಜುಗಳು ಕೊಚ್ಚಿ ಹೋಗಿವೆ. ಬೈಕ್‌, ಸ್ಕೂಟರ್‌ಗಳು ಕೊಚ್ಚಿ ಹೋಗಿವೆ. ಜೀಪಿಗೆ ಮಣ್ಣು ತುಂಬಿದೆ. ಪಂಪ್‌ ಸೆಟ್‌ ಸ್ವಿಚ್‌ಬೋರ್ಡ್‌ ಅಷ್ಟೇ ಕಾಣಿಸುತ್ತಿದೆ.

ಭೂಕಂಪ, ಸುನಾಮಿ ಅನುಭವ
ಗುರುವಾರ ರಾತ್ರಿ ಸುಮಾರು 11.45ಕ್ಕೆ ಭೂಕಂಪವಾದ ಹಾಗೆ ಭಾರೀ ಸದ್ದು ಕೇಳಿಸಿತು. ನಾಯಿಗಳು ಒಮ್ಮೆಲೆ ಬೊಗಳಲಾರಂಭಿಸಿದವು. ಕಿಟಕಿಯ ಬಾಗಿಲು ತೆರೆದು ನೋಡಿದಾಗ ಸುನಾಮಿ ರೀತಿಯಲ್ಲಿ ನೀರು ಜಗಲಿ ಏರಿಯಾಗಿತ್ತು. ಕಟ್ಟೆ ಒಡೆದಿದೆ ಎಂದು ತತ್‌ ಕ್ಷಣ ಊಹಿಸಿದೆ. ಮಂಚದ ಮೇಲೆ ನಿಲ್ಲು ಎಂದು ಪತ್ನಿಗೆ ಸೂಚಿಸಿದೆ. ಮನೆ ಬಾಗಿಲು ನೀರಿನ ರಭಸಕ್ಕೆ ಒಡೆದು ಅಡುಗೆ ಮನೆಯ ಗ್ಯಾಸ್‌ ಸಿಲಿಂಡರ್‌, ರೆಫ್ರಿಜರೇಟರ್‌ ಎಲ್ಲವೂ ನೀರಿನೊಂದಿಗೆ ಮುಂದಿನ ಕೋಣೆಗೆ ಬಂದವು. ಮನೆ ಸಾಮಗ್ರಿ ಚೆಲ್ಲಾಪಿಲ್ಲಿಯಾಗಿ ತೇಲಿ ಹೋದವು. ನಾಲ್ಕೂ ಕಡೆಗಳಿಂದ ನೀರು ಒಳ ನುಗ್ಗಿತ್ತು.

ಜನಪ್ರತಿನಿಧಿ, ಅಧಿಕಾರಿಗಳ ಭೇಟಿ
ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. MSEZ ಅಧಿಕಾರಿಗಳೊಂದಿಗೆ ಮಾತನಾಡಿ, ಮನೆ ಹಾಗೂ ದೇವಸ್ಥಾನಕ್ಕೆ ಸೂಕ್ತ ನಷ್ಟ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಘಟನೆಯ ಬಗ್ಗೆ ಡಿಸಿಗೆ ವರದಿ ಸಲ್ಲಿಸಲಾಗುವುದು. ಈ ಸಮಸ್ಯೆಗೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವೈಶಾಲಿ ಹೇಳಿದ್ದಾರೆ. ಸ್ಥಳಕ್ಕೆ ಅಭಯಚಂದ್ರ, ಐವನ್‌ ಡಿ’ಸೋಜಾ, ತಹಶೀಲ್ದಾರರು, ಬಜಪೆ ಪೊಲೀಸ್‌ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಸೂಕ್ತ ಪರಿಹಾರದ ಭರವಸೆ
ದೊಡ್ಡಿಕಟ್ಟದಲ್ಲಿ ಸಂಭವಿಸಿರುವ ಅನಾಹುತದ ಕುರಿತಂತೆ ಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಘಟನೆಯಿಂದ ಹಾನಿ ಸಂಭವಿಸಿದ ಕಡೆಗೆ ಸೂಕ್ತ ಪರಿಹಾರ ನೀಡಲಾಗುವುದು. ಈ ಬಗ್ಗೆ ಪೂರಕ ಕ್ರಮಗಳನ್ನು ಸಂಸ್ಥೆಯ ವತಿಯಿಂದ ಶೀಘ್ರದಲ್ಲಿ ಕೈಗೊಳ್ಳಲಾಗುವುದು. ಅಲ್ಲಿನ ಮನೆ, ದೇವಸ್ಥಾನ ಈ ಮೊದಲು ಹೇಗಿತ್ತೋ ಅದೇರೀತಿ ಮರುವ್ಯವಸ್ಥೆ ಮಾಡಿಕೊಡಲಾಗುವುದು ಎಂದು MSEZನ‌ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago