ಉಡುಪಿ: ಉಡುಪಿಯ ಕರಾವಳಿ ಸಂಗೀತ ಕಲಾವಿದರ ಒಕ್ಕೂಟವು ರಾತ್ರಿ ಕರ್ಫ್ಯೂನಿಂದಾಗಿ ಕಲಾವಿದರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಸರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಿತು. ಆರ್ಕೆಸ್ಟ್ರಾ ಕಲಾವಿದರಿಗೆ ರಾತ್ರಿ ಕಾರ್ಯಕ್ರಮ ಮುಗಿಸಿ ಬರುವಾಗ ಆಗುತ್ತಿರುವ ತೊಂದರೆಗಳು ಹಾಗೂ ರಾತ್ರಿ ಕರ್ಫ್ಯೂನಿಂದಾಗಿ ವಹಿಸಿಕೊಂಡ ಸಂಗೀತ ಕಾರ್ಯಕ್ರಮಗಳು ರದ್ದಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ.
ಕೊರೊನಾದಿಂದಾಗಿ ಅದೆಷ್ಟೋ ಪೂರ್ವ ನಿಗದಿತ ಆರ್ಡರ್ ಗಳು ಕ್ಯಾನ್ಸಲ್ ಆಗಿದ್ದು, ನಾವೆಲ್ಲ ತುಂಬ ಆರ್ಥಿಕ ಸಂಕಷ್ಟದಲ್ಲಿದ್ದೇವೆ. ಕಳೆದ ವರ್ಷದ ಸೀಸನ್ ಸಮಯದಲ್ಲಿ ಮತ್ತು ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರಿದಿದ್ದು ನಮಗೆಲ್ಲ ತುಂಬ ಆತಂಕ ಉಂಟಾಗಿದೆ. ಇದನ್ನು ಸರಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಸಂಗೀತ ಕಲಾವಿದರ ಉಡುಪಿ ವಲಯಾಧ್ಯಕ್ಷೆ ಮುಕ್ತಾ ಶ್ರೀನಿವಾಸ್ ಭಟ್, ಸಂತೋಷ್ ಪಾನಾ, ಪ್ರಜ್ವಲ್ ಆಚಾರ್ಯ,ಶರತ್ ಉಚ್ಚಿಲ, ವಾಮನ ಕುಮಾರ್, ಅರುಣ್ , ರೋಹಿತ್ ಮಲ್ಪೆ ಸಹಿತ ಹಲವು ಕಲಾವಿದರು ಉಪಸ್ಥಿತರಿದ್ದರು.
ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ : ಆರ್. ಅಶೋಕ್ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…