ನವದೆಹಲಿ,: ಇಡೀ ಸರ್ಜಿಕಲ್ ದಾಳಿ ಪ್ರಧಾನಿ ಮೋದಿ ಕಣ್ಗಾವಲಿನಲ್ಲೇ ನಡೆದಿದೆ. ಸೋಮವಾರ ರಾತ್ರಿ ಖಾಸಗಿ ಕಾರ್ಯಕ್ರಮ ಮುಗಿಸಿದ ಅವರು, ಅನಂತರ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡರು. ಕಾರ್ಯಾಚರಣೆ ವೇಳೆ ಪ್ರಧಾನಿ ಮೋದಿ ರಾತ್ರಿ ಇಡೀ ನಿದ್ದೆಗೆಟ್ಟು ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.
ಸರ್ಜಿಕಲ್ ಸ್ಚ್ರೈಕ್ 2.0 ಎಂದೇ ಹೇಳಲಾಗುತ್ತಿರುವ ವಾಯುಸೇನೆಯ ಪಿಒಕೆ ಮೇಲಿನ ದಾಳಿ ಸಂದರ್ಭದಲ್ಲಿ ಪ್ರಧಾನಿ ಮೋದಿ ಮುಂಜಾನೆವರೆಗೂ ನಿದ್ರೆ ಮಾಡಿರಲಿಲ್ಲವಂತೆ. ಈ ಬಗ್ಗೆ ಸರ್ಕಾರದ ಅಧಿಕೃತ ಮೂಲಗಳೇ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಎಚ್ಚರವಾಗಿದ್ದು ಅಧಿಕಾರಿಗಳಿಂದ ಕ್ಷಣ, ಕ್ಷಣದ ಮಾಹಿತಿ ಪಡೆಯುತ್ತಿದ್ದರು. ಅವರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕೂಡ ಸಾಥ್ ನೀಡಿದ್ದರು ಎನ್ನಲಾಗಿದೆ.
ಪುಲ್ವಾಮ ಉಗ್ರ ದಾಳಿ ಬಳಿಕ ಗಡಿಯಲ್ಲಿದ್ದ ಉಗ್ರರು ಭಾರತ ದಾಳಿ ಮಾಡುತ್ತದೆ ಎಂಬ ಭಯದಿಂದ ಉಗ್ರರ ಸ್ವರ್ಗವೆಂದೇ ಖ್ಯಾತಿಗಳಿಸಿರುವ ಬಾಲಾಕೋಟ್ ಉಗ್ರ ಕ್ಯಾಂಪ್ ಗೆ ತೆರಳಿದ್ದರು. ಈ ಮಾಹಿತಿ ಪಡೆದ ವಾಯುಸೇನೆ ಇದೇ ಸರಿಯಾದ ಸಂದರ್ಭ ಎಂದು ಇಂದು ಮುಂಜಾನೆ ದಾಳಿ ಮಾಡಿ ಬರೊಬ್ಬರಿ 350ಕ್ಕೂ ಹೆಚ್ಚು ಉಗ್ರರರನ್ನು ಹೊಡೆದುರುಳಿಸಿದೆ.
ಪ್ರಧಾನಿ ಮೋದಿ ಅವರು ದೆಹಲಿಯ ದಕ್ಷಿಣ ಬ್ಲಾಕ್ ನಲ್ಲಿರುವ ರಾಷ್ಟ್ರಪತಿ ಭವನದ ಕೋಣೆಯಲ್ಲಿ ಕುಳಿತು ವಾಯುಪಡೆ ಸಂಪೂರ್ಣ ಕಾರ್ಯಾಚರಣೆ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದರು. ಕಾರ್ಯಾಚರಣೆ ಯಶಸ್ವಿಯಾಗಿ ಭಾರತೀಯ ವಾಯುಸೇನಾ ಸಿಬ್ಬಂದಿಗಳೆಲ್ಲರೂ ಯಾವುದೇ ತೊಂದರೆ ಇಲ್ಲದೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿದ್ದಾರೆ ಎಂದ ಬಳಿಕವಷ್ಟೆ ಪ್ರಧಾನಿ ಮೋದಿ 4.30ರ ಸುಮಾರಿಗೆ ತಮ್ಮ ನಿವಾಸದ ತೆರಳಿದರು. ಅದಕ್ಕೂ ಮೊದಲು ಯುದ್ಧ ವಿಮಾನಗಳ ನೇತೃತ್ವ ವಹಿಸಿಕೊಂಡ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…