ಬೆಂಗಳೂರು, (Vishwanews24): ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ 9 ನಗರದಲ್ಲಿ ಹೇರಿರುವ ಕರೋನಾ ಕರ್ಪ್ಯೂ ವಿರುದ್ದ ಕಿಡಿಕಾರಿದ್ದಾರೆ. ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ” ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ದ ವ್ಯಂಗ್ಯವಾಡಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಅವರಿಗೆ ಕೋವಿಡ್ ದೃಢ -Vishwanews24
ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಮುಖ್ಯಮಂತ್ರಿಗಳೇ ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಸಿಎಂ ಮತ್ತು ಆರೋಗ್ಯ ಸಚಿವ ಹೊಂದಿದ್ದರೆ,ಮೊದಲುಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು.ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿ ಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.
ಬೆಳಗಾವಿ : ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ -Vishwanews24
ದೇಶದ ಪ್ರಧಾನಿ ಅಂಧ ದರ್ಬಾರ್‌ನಿಂದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ವೈ ಸ್ಪೂರ್ತಿ ಪಡೆದರೆ,ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ.ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೆ ಬುದ್ದಿ ಹೇಳಿ ಎಂದು ಹೇಳಿದ್ದಾರೆ
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…