ಮೈಸೂರು: ‘ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ಹೇಳಿದರು.
ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಬಳಿಕ ಸಚಿವರು ಪತ್ರಕತ೯ರೊಂದಿಗೆ ಮಾತನಾಡಿದರು.
‘ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವೆ’ ಎಂದು ತಿಳಿಸಿದರು.
‘ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೆ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸೋಮಶೇಖರ್ ಹೇಳಿದರು.
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …