ಬೆಂಗಳೂರು: ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ.
ಜಿಮ್ ಟ್ರೈನರ್ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.
ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.
ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು , ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್ ಸೇರಿ ಮೂವರನ್ನು ಬಂಧಿಸಿದ್ದಾರೆ.
ನಡೆದಿದ್ದೇನು?
ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದಾರೆ. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ.
ಮಾರುತಿಗೌಡ ಸಹಚರರಿಂದ ದೂರು ಪಡೆದ ಹೈಗ್ರೌಂಡ್ ಪೊಲೀಸರು ಮೊದಲಿಗೆ ದುನಿಯಾ ವಿಜಯ್‍ಗೆ ಕರೆ ಮಾಡಿ ಎಚ್ಚರಿಸಿದ್ದಾರೆ. 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷನಾಗಿದ್ದಾರೆ. ಜೊತೆಗೆ ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೋಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ.
ಇದೇ ವೇಳೆ ಪಾನಿಪುರಿ ಕಿಟ್ಟಿ ಹುಡುಗರು, ದುನಿಯ್ ವಿಜಿ ಕಾರ್ ನ ಮೇಲೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಕೆಎಸ್‍ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪೊಲೀಸ್ ಠಾಣೆ ಬಳಿಯೂ ದರ್ಪ ಮೆರೆಯುತ್ತಿದ್ದ ವಿಜಿಗೆ ಎಸಿಪಿ ರವಿಶಂಕರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದುನಿಯ್ ವಿಜಯ್ ಹಾಗೂ ಸಹಚರರನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 365, 342, 325, 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈಗ್ರೌಂಡ್ ಪೊಲೀಸರು ದುನಿಯ್ ವಿಜಯ್ ನನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…