ಉಡುಪಿ: ರಾಮನವಮಿ ದಿನವೇ ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಲಿ. ಹಿಂದೂ ಪರಂಪರೆಯ ಪ್ರತಿನಿಧಿಯಾಗಿ ಈ ಕೆಲಸ ನಡೆಸಿಕೊಡೆಸಿ ಎಂದು ಯೋಗ ಗುರು ಬಾಬಾ ರಾಮದೇವ್ ಹಕ್ಕೊತ್ತಾಯ ಮುಂದಿಟ್ಟಿದ್ದಾರೆ.
ಅವರು ಶುಕ್ರವಾರ ಉಡುಪಿಗೆ ಆಗಮಿಸಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿತ್ತು. ದೇಶದ ಅನೇಕ ಮಹಾಪುರುಷರ ಆಂದೋಲನದ ಫಲವಾಗಿದ್ದು ಈ ಎಲ್ಲಾ ಮಹಾನುಭಾವರ ಒಳಗೊಳ್ಳುವಿಕೆಯಿಂದ ಟ್ರಸ್ಟ್ ನಿರ್ಮಾಣವಾಗಲಿ. ಅಯೋಧ್ಯೆ ಕೇವಲ ರಾಮಮಂದಿರ ಮಾತ್ರವಲ್ಲ, ವೈದಿಕ ಜ್ಞಾನ ಪರಂಪರೆ ಪ್ರತೀಕವಾಗಲಿ ಎಂದು ರಾಮ ಜನ್ಮಭೂಮಿ ನ್ಯಾಸ್ ಗೆ ರಾಮ್ ದೇವ್ ಹೇಳಿದರು.
ಅಯೋಧ್ಯೆ ಜ್ಞಾನತೀರ್ಥವಾಗಲಿ, ವಿದ್ಯಾಪರಂಪರೆಯ ಪ್ರತೀಕವಾಗಲಿ. ರಾಮನವಮಿ ದಿನವೇ ರಾಮಮಂದಿರಕ್ಕೆ ಶಿಲಾನ್ಯಾಸವಾಗಲಿ ಎಂದ ಬಾಬಾ ರಾಮ್ ದೇವ್ ರಾಮಮಂದಿರಕ್ಕೆ ಪ್ರಧಾನಿಯವರೇ ಶಿಲಾನ್ಯಾಸ ಮಾಡಲಿ. ಸರ್ಕಾರವೇ ನೇರವಾಗಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಆದರೆ ಪ್ರಧಾನಿ ಮೋದಿ ಹಿಂದೂ ಪರಂಪರೆಯ ಪ್ರತಿನಿಧಿಯಾಗಿ ಶಿಲಾನ್ಯಾಸ ಮಾಡಲು ಅಡ್ಡಿಯಿಲ್ಲ ಎಂದರು.
ಮಂದಿರದ 67 ಎಕರೆ ಭೂಮಿ ಹೊರತು ಪಡಿಸಿ ಮಸೀದಿ ನಿರ್ಮಾಣವಾಗಲಿ ಅಲ್ಲದೆ ಅಯೋಧ್ಯೆಯಲ್ಲಿ ಮಸೀದಿಯೂ ದಿವ್ಯವಾಗಿ ನಿರ್ಮಾಣ ಅಗಲಿ. ನಮ್ಮ
ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಂರಿಗೆ ಮೆಕ್ಕಾ ಮದೀನ, ಸಿಖ್ಖರಿಗೆ ಸ್ವರ್ಣ ಮಂದಿರ ರೀತಿ ಹಿಂದುಗಳ ಭಕ್ತಿ ನಂಬಿಕೆಯಂತೆ ಅಯೋಧ್ಯೆಯಲ್ಲಿ ರಾಮಮಂದಿರ ರೂಪುಗೊಳ್ಳಬೇಕು. ಅಯೋಧ್ಯೆ ಜ್ಞಾನತೀರ್ಥವಾಗಲಿ, ವಿದ್ಯಾಪರಂಪರೆಯ ಪ್ರತೀಕವಾಗಲಿ ಎಂದು ಆಶಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…