Featured

ರಾಮನೂರು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ರಾಮನೂರು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ  ಅವರು ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ. ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್‌ ಶೋ ಹಮ್ಮಿಕೊಂಡಿದ್ದು, ಈಗಾಗಲೇ ರೋಡ್‌ ಶೋ ಆರಂಭಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ  ಆಗಮಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು.

ರೋಡ್‌ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ರೋಡ್‌ ಶೋ ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನಸೂರೆಗೊಂಡವು. ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನದೊಂದಿಗೆ ಪ್ರಧಾನಿಗಳನ್ನು ಸ್ವಾಗತಿಸಿದವು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

14 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

15 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

15 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago