ಅಯೋಧ್ಯೆ: ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ ಅವರು ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ. ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್ ಶೋ ಹಮ್ಮಿಕೊಂಡಿದ್ದು, ಈಗಾಗಲೇ ರೋಡ್ ಶೋ ಆರಂಭಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು.
ರೋಡ್ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ರೋಡ್ ಶೋ ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನಸೂರೆಗೊಂಡವು. ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನದೊಂದಿಗೆ ಪ್ರಧಾನಿಗಳನ್ನು ಸ್ವಾಗತಿಸಿದವು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…