ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಆದರೀಗ ಇದರ ಬೆನ್ನಲ್ಲೇ ಚುನಾವಣೆಗೂ ಮೊದಲು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೂ ಸದ್ದು ಮಾಡಲಾರಂಭಿಸಿವೆ. ಅಲ್ಲದೇ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಶೀಘ್ರವಾಗಿ ಪೂರೈಸಿ ಎಂಬ ಒತ್ತಾಯ ಹೆಚ್ಚಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 542 ಕ್ಷೇತ್ರಗಳ ಪೈಕಿ 303ನ್ನು ಗೆದ್ದ ಬಳಿಕ ಮೊದಲ ಬಾರಿ ಮಾತನಾಡಿದ RSS ಮುಖ್ಯಸ್ಥ ಮೋಹನ್ ಭಾಗವತ್ ”’ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ. ಬೇರೆಯವರಿಗೆ ವಹಿಸಿದರೆ, ಆ ಕೆಲಸ ಮಾಡುವ ವ್ಯಕ್ತಿಯ ಮೇಲೆ ನಿಗಾ ಇರಿಸಬೇಕಾಗುತ್ತದೆ. ಬಹುದಿನಗಳಿಂದ ವಿಳಂಬಗೊಂಡ ಕೆಲಸವನ್ನು ಮಾಡಿ ಮುಗಿಸುವ ಕಡೆ ಮುತುವರ್ಜಿ ವಹಿಸಬೇಕಿದೆ,” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಾವು ಯಾವುದನ್ನು ಬಯಸುತ್ತೇವೋ ಅದನ್ನು ಪಡೆಯಲು ನಾವು ಕಾಯಬೇಕಾಗುತ್ತದೆ. ಅಲ್ಲದೇ ನ್ಮಮ ಗುರಿ ತಲುಪಲು ಸಹಾಯ ಮಾಡುವವರಿಗೆ ನಾವು ಸಹಾಯ ಮಾಡಬೇಕು ಎಂದಿದ್ದಾರೆ. RSS ಆರಂಭದಿಂದಲೂ ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಿಸಬೇಕೆಂಬ ಹಂಬಲ ಹೊಂದಿದೆ ಎಂಬುವುದು ಉಲ್ಲೇಖನೀಯ. ಇದೀಗ ಬಿಜೆಪಿ ಲೋಕ ಸಮರದಲ್ಲಿ ಜಯ ಗಳಿಸಿದ ಬೆನ್ನಲ್ಲೇ ರಾಮ ಮಂದಿರ ನಿರ್ಮಿಸಲು ಒತ್ತಡ ಹೇರಲಾರಂಭಿಸಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…