ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು ಮತಗಳನ್ನು ಕೇಳಿ ಪಡೆದವರು, ಅದೇ ಶ್ರೀರಾಮನಿಗೆ ಜನಸಾಮಾನ್ಯರು ನೀಡಿದ ದೇಣಿಗೆಯ ಒಂದೊಂದು ರೂಪಾಯಿಯ ಲೆಕ್ಕಕೊಡಲು ಬಿಜೆಪಿ ನಾಯಕರಿಗೆ ಧೈರ್ಯ ಇಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷೆ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಪ್ರಶ್ನಗಳಿಗೆ ಉತ್ತರ ಕೊಡದೆ ಇರುವುದು ಸಾರ್ವಜನಿಕ ಭಾಷಾ ಪಂಡಿತರ ಸಾಮಾನ್ಯ ಜ್ಞಾನದ ಪರಿಮಿತಿಗೆ ಬರುವುದಿಲ್ಲವೇ?” ರಾಮನ ಹೆಸರನ್ನು ರಾಜಕೀಯಕ್ಕೆ ಬಳಸಬಹುದು; ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಅಯೋಧ್ಯೆ ಶ್ರೀರಾಮನ ಹೆಸರಿನಲ್ಲಿ ನಿರ್ಮಾಣವಾದ ದೇವಸ್ಥಾನದ ಕಾಮಗಾರಿ ವೆಚ್ಚ ಹಾಗೂ ನಿರ್ವಹಣೆಯಲ್ಲಿ ನಡೆದಿರುವ ಕೋಟ್ಯಂತರ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಎದ್ದಿರುವ ಪ್ರಶ್ನೆಗಳಿಗೆ ಉತ್ತರ ನೀಡಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇದೆಯೇ? “ನಾ ಖಾವೂಂಗಾ, ನಾ ಖಾನೇ ದೂಂಗಾ” ಎಂದು ಬೊಬ್ಬೆ ಹೊಡೆದಿದ್ದವರು ಈಗ ಬಾಯ್ತೆರೆದು ಮಾತಾಡುವುದು ಬಿಡಿ, ಮುಖ ಕೂಡ ತೋರಿಸುತ್ತಿಲ್ಲ ಯಾಕೆ? ಬಾಯಿ ಬಿಟ್ಟರೆ ಮುಖವಾಡ ಕಳಚುವ ಭಯವೇ? ಎಂದು ಪ್ರಶ್ನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…