Featured

ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ – vishwanews24

ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ

ನವದೆಹಲಿ: ಅಯೋಧ್ಯೆಯಲ್ಲಿ  ರಾಮಮಂದಿರ  ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ.

ಸೈಬರ್ ಕ್ರಿಮಿನಲ್‌ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ ಪಡೆಯಲು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಎಚ್ಚರಿಸಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ರಾಮಮಂದಿರ ದೇವಾಲಯಕ್ಕಾಗಿ ದೇಣಿಗೆ ನೀಡುವಂತೆ ಸಂದೇಶ ಕಳುಹಿಸಲಾಗಿದೆ.

ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ಈ ವಿಷಯವನ್ನು ದೆಹಲಿ ಮತ್ತು ಉತ್ತರ ಪ್ರದೇಶದ ಗೃಹ ಸಚಿವಾಲಯ ಮತ್ತು ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಮಂದಿರದ ನಿರ್ಮಾಣದ ಉಸ್ತುವಾರಿ ವಹಿಸಿರುವ ಟ್ರಸ್ಟ್ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ನಿಧಿ ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಾನು ಗೃಹ ಸಚಿವಾಲಯ, ಉತ್ತರ ಪ್ರದೇಶ ಡಿಜಿಪಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಜನರು ಇಂತಹ ವಂಚನೆಗಳಿಗೆ ಬಲಿಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದೇವಸ್ಥಾನಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಮತ್ತು ದೂರವಾಣಿ ಕರೆಗಳು ಬಂದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಕರೆ ಸ್ವೀಕರಿಸಿದ ವ್ಯಕ್ತಿಗಳಲ್ಲಿ ಒಬ್ಬರು, VHP ಕಾರ್ಯಕರ್ತರೊಂದಿಗೆ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.

ದೇಣಿಗೆ ನೀಡುವವರಂತೆ ವಂಚಕರಿಗೆ ಕರೆ ಮಾಡಿ ಅದರ ಆಡಿಯೋ ರೆಕಾರ್ಡ್‌ನ್ನು ವಿಹೆಚ್‌ಪಿ ಕಾರ್ಯಕರ್ತರೊಬ್ಬರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ವಂಚಕ, ದಾನಿಗಳ ಹೆಸರುಗಳು ಮತ್ತು ಸಂಪರ್ಕ ವಿವರಗಳನ್ನು ನಮೂದಿಸಲಾಗುತ್ತಿದೆ. ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅವರನ್ನು ರಾಮ ಮಂದಿರಕ್ಕೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾನೆ.

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago