ನವದೆಹಲಿ : ರಾಮಮಂದಿರ ಅಯೋಧ್ಯಾ ಪ್ರಸಾದ್’ ಹೆಸರಿನಲ್ಲಿ ಸಿಹಿತಿಂಡಿಗಳನ್ನು www.amazon.in ನಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಅಮೆಜಾನ್ ಗೆ ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.
ಗ್ರಾಹಕರ ವ್ಯವಹಾರಗಳ ಇಲಾಖೆ ನೀಡಿರುವ ಅಧಿಕೃತ ಹೇಳಿಕೆಯ ಪ್ರಕಾರ ಅಮೆಜಾನ್, ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದದ ಹೆಸರಿನಲ್ಲಿ ಸಿಹಿತಿಂಡಿಗಳ ಮಾರಾಟ ಮಾಡುವ ಮೂಲಕ ಮೋಸದ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ನೀಡಿದ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.
ಇದರಲ್ಲಿ ರಘುಪತಿ ಘೀ ಲಾಡೂ, ಖೋಯಾ ಖೋಬಿ ಲಾಡೂ,ಘೀ ಬಂಡಿ ಲಾಡೂ, ದೇಸಿ ಹಸುವಿನ ಹಾಲಿನ ಪೇಡಾ ಸೇರಿದಂತೆ ಹಲವು ಸಿಹಿ ತಿಂಡಿಗಳನ್ನು ಹೈಲೈಟ್ ಮಾಡಲಾಗಿದೆ.”ಶ್ರೀ ರಾಮಮಂದಿರ ಅಯೋಧ್ಯಾ ಪ್ರಸಾದ್” ಎಂದು ಹೇಳಿಕೊಳ್ಳುವ ವಿವಿಧ ಸಿಹಿತಿಂಡಿಗಳು/ಆಹಾರ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿರುವುದನ್ನು ಗಮನಿಸಲಾಗಿದೆ.
ಗ್ರಾಹಕರ ರಕ್ಷಣೆ(ಇ-ಕಾಮರ್ಸ್) ನಿಯಮಗಳು, 2020 ರ ಅಡಿಯಲ್ಲಿ, ಆಹಾರ ಉತ್ಪನ್ನಗಳ ಮಾರಾಟವನ್ನು ಆನ್‌ಲೈನ್‌ನಲ್ಲಿ ಸಕ್ರಿಯಗೊಳಿಸುವುದರಿಂದ ಉತ್ಪನ್ನದ ನಿಜವಾದ ಗುಣಲಕ್ಷಣಗಳ ಬಗ್ಗೆ ಗ್ರಾಹಕರ ದಾರಿ ತಪ್ಪಿಸುತ್ತದೆ ಎಂಬುದು ಗಮನಾರ್ಹವಾಗಿದೆ.
ಹೀಗಾಗಿ CCPA ಅಮೆಜಾನ್ ಗೆ ನೋಟಿಸ್ ಜಾರಿ ಮಾಡಿದೆ.ಏಳು ದಿನಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೋರಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ಒಂದು ವೇಳೆ ನೋಟಿಸ್ ಗೆ ಉತ್ತರ ನೀಡಲು ವಿಫಲವಾದರೆ ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ನಿಬಂಧನೆಗಳ ಅಡಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…