Featured

ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯತ್ತ ಆರ್‌ಎಸ್‌ಎಸ್‌, ವಿಎಚ್ ಪಿ, ಭಜರಂಗದಳ, ಹಾಗೂ ಶಿವಸೇನೆ ಕಾರ್ಯಕರ್ತ ಸಂಘಟನೆಗಳ ಹೆಜ್ಜೆ..

ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ಆಗ್ರಹಿಸಿ ಭಾನುವಾರ ಆಯೋಜನೆಗೊಂಡಿರುವ ಬೃಹತ್‌ ಧರ್ಮಸಭೆ ಹಿನ್ನೆಲೆಯಲ್ಲಿ ದೇಶಾದ್ಯಂತದ ಲಕ್ಷಾಂತರ ಸಾಧು-ಸಂತರು, ಸಂಘ ಪರಿವಾರದ ಕಾರ್ಯಕರ್ತರು ಅಯೋಧ್ಯೆ ಕಡೆಗೆ ಸಾಗುತ್ತಿದ್ದು, ಧರ್ಮಸಭೆಯಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆ ..

ಅಯೋಧ್ಯೆ : ಭಾರತೀಯರ ಬಹುದಿನಗಳ ಒತ್ತಾಸೆಯಾದ ಮರ್ಯಾದ ಪುರುಷೋತ್ತಮ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹಾಕಲು ನಾಳೆ ಬೃಹತ್ ಧರ್ಮಸಭೆ ನಡೆಯಲಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಲವು ಹಿಂದೂ ಸಂಘಟನೆಗಳು ಪಣ ತೊಟ್ಟಿವೆ. ಹೀಗಾಗಿ ಶಿವನ ವೇಷದಲ್ಲಿ ತ್ರಿಶೂಲ ಹಿಡಿದುಕೊಂಡು ಅನೇಕ ಆರ್‌ಎಸ್‌ಎಸ್‌ ಕಾರ್ಯಕರ್ತರು ಉತ್ತರ ಪ್ರದೇಶದ ಅಯೋಧ್ಯೆಗೆ ದಾಂಗುಡಿ ಇಡುತ್ತಿದ್ದಾರೆ. ನವೆಂಬರ್ 25ರಂದು ನಡೆಯಲಿರುವ ವಿಎಚ್ ಪಿ ಆಯೋಜಿತ ಧರ್ಮಸಭೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ವಿಶ್ವಹಿಂದು ಪರಿಷತ್ ನೇತೃತ್ವದಲ್ಲಿ ನಡೆಯುತ್ತಿರುವ ಧರ್ಮ ಸಭೆಗೆ ದೇಶದ ವಿವಿಧ ಭಾಗಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ , ಹಿರಿಯ ಆರ್‌ಎಸ್‌ಎಸ್‌ ನಾಯಕರು ಸಹ ಹೆಚ್ಚು ಜನರನ್ನು ಸೇರಿಸಲು ಅನೇಕ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಮುಂಬೈನಿಂದ 25 ಸಾವಿರಕ್ಕೂ ಅಧಿಕ ಶಿವಸೇನೆ ಕಾರ್ಯಕರ್ತರು ಮತ್ತೊಂದೆಡೆ ಆರ್‍ಎಸ್‍ಎಸ್, ವಿಎಚ್ ಪಿ, ಭಜರಂಗದಳ ಸೇರಿದಂತೆ ಮತ್ತಿತರ ಹಿಂದೂ ಸಂಘಟನೆಗಳ ಭಾರೀ ಸಂಖ್ಯೆಯ ಕಾರ್ಯಕರ್ತರು ಅಯೋಧ್ಯೆಗೆ ಬಂದಿದ್ದಾರೆ.

ಕರಾವಳಿ ಪ್ರದೇಶ ಎಂದರೆ ಅದು ಹಿಂದೂಗಳ ಭದ್ರಕೋಟೆ, ದೇಶದ ಯಾವುದೇ ಮೂಲೆಯಲ್ಲಿ ಹಿಂದುತ್ವದ ಮೇಲೆ ದಾಳಿ ನಡೆದರೂ ಮೊದಲು ಧ್ವನಿ ಎತ್ತುವುದು ಕರಾವಳಿಯಲ್ಲಿ. ಸಂಘಪರಿವಾರದ ಅಥವಾ ಬಿಜೆಪಿ ಪಕ್ಷದ ಬೇರು ಗಟ್ಟಿಯಾಗಿ ನೆಲೆಯೂರಿದೆ ಎಂದರೆ ಅದು ಕರಾವಳಿಯಲ್ಲಿ ಎಂಬುದು ಸತ್ಯ. ಈಗ ಅದೇ ಕರಾವಳಿ ಭಾಗವಾದ ಮಂಗಳೂರಿನಿಂದಲೇ ರಣಕಹಳೆ ಮೊಳಗಿಸಲು ಸಕಲ ಸಿದ್ದತೆ ನಡೆಸಿದ ವಿಎಚ್ ‌ಪಿ, ಇದೇ ಭಾನುವಾರ ಅಂದರೆ 25ನೇ ತಾರೀಕಿನಂದು ಬೃಹತ್ ಜನಾಗ್ರಹ ಸಭೆ ಮತ್ತು ಹಿಂದೂ ಸಮಾವೇಶ ಹಮ್ಮಿಕೊಂಡಿದೆ. ಈಗಾಗಲೇ ವಿಶ್ವ ಹಿಂದೂ ಪರಿಷತ್ ಹಲವಾರು ರೀತಿಯಲ್ಲಿ ಹೋರಾಟ ಮಾಡುತ್ತಾ ಬಂದಿದ್ದು ಇದೀಗ ದೇಶಾದ್ಯಂತ ಏಕಕಾಲಕ್ಕೆ ಬೃಹತ್ ಸಮಾವೇಶ ನಡೆಸಿ ಸರಕಾರವನ್ನು ಆಗ್ರಹಿಸಲು ತೀರ್ಮಾನಿಸಿದೆ. ಮಂಗಳೂರು ಮತ್ತು ಬೆಂಗಳೂರಿನಲ್ಲಿ ಇದೇ 25ನೇ ತಾರೀಕಿನಂದು ಸಮಾವೇಶ ನಡೆದರೆ ಡಿಸೆಂಬರ್ 2ರಂದು ಉಡುಪಿ ಜಿಲ್ಲೆಯಲ್ಲಿ ಸಮಾವೇಶ ನಡೆಯಲಿದೆ.

ಬೇಡಿಕೆ
ನಾಳೆ ನಡೆಯಲಿರುವ ಧರ್ಮ ಸಭೆಯಲ್ಲಿ ಮುಖ್ಯವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬುದು ಪ್ರಮುಖ ಒತ್ತಾಯವಾಗಿದೆ. ರಾಮಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಜನವರಿ ತಿಂಗಳ ನಂತರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು. ನಮಗೆ ನಮ್ಮದೇ ಆದ ಆದ್ಯತೆಗಳಿವೆ. ಸೂಕ್ತ ಸಂದರ್ಭದಲ್ಲಿ ಅರ್ಜಿ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರ ನೇತೃತ್ವದ ಪೀಠ ಹೇಳಿತ್ತು.

ನ್ಯಾಯಾಲಯದ ಈ ತೀರ್ಪಿನಿಂದಾಗಿ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಸಂಸತ್‍ನಲ್ಲಿ ವಿಶೇಷ ಕಾನೂನು ರೂಪಿಸಬೇಕೆಂದು ಧಾರ್ಮಿಕ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡ ಹಾಕಿದ್ದಾರೆ. ಮುಂದಿನ ತಿಂಗಳು ಆರಂಭವಾಗಲಿರುವ ಸಂಸತ್‍ನ ಚಳಿಗಾಲದ ಅಧಿವೇಶನದಲ್ಲಿ ಮಂದಿರ ನಿರ್ಮಾಣ ಕುರಿತಂತೆ ಖಾಸಗಿ ಮಸೂದೆ ಮಂಡಿಸುವುದಾಗಿ ಬಿಜೆಪಿ ರಾಜ್ಯಸಭಾ ಸದಸ್ಯ ರಾಕೇಶ್ ಸಿನ್ಹಾ ಹೇಳಿದ್ದಾರೆ. ಇನ್ನೊಂದೆಡೆ ಶಿವಸೇನೆ ಕೂಡ ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದೆ.

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

23 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

36 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago