ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ನಂಬಿಕೆಯ ಬಗ್ಗೆ ಧರ್ಮೋಪದೇಶ ನೀಡುತ್ತಿರುವುದು ನಗೆಪಾಟಲಿಗೆ ಈಡಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪರೋಕ್ಷವಾಗಿ ಸಮಾಜವಾದಿ ಪಕ್ಷದ ಕುರಿತು ವ್ಯಂಗ್ಯವಾಡಿದ್ದಾರೆ.
ತಮ ಕ್ಷೇತ್ರವಾದ ಗೋರಖ್‌ಪುರ ನಗರಕ್ಕೆ 995 ಕೋಟಿ ರೂ.ಗೂ ಹೆಚ್ಚು ಮೌಲ್ಯದ 14 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ನಂತರ ಮಾತನಾಡಿದ ಅವರು, 2017 ಕ್ಕಿಂತ ಮೊದಲು ಗಲಭೆಗಳು ಸಾಮಾನ್ಯವಾಗಿದ್ದವು, ಅರಾಜಕತೆ ಉತ್ತುಂಗದಲ್ಲಿತ್ತು. ಹೋಳಿ, ವಿಜಯದಶಮಿ, ದುರ್ಗಾ ಪೂಜೆ ಮತ್ತು ರಾಮನವಮಿಯ ಸಮಯದಲ್ಲಿ ಹೇಗೆ ಗಲಭೆಗಳು ಭುಗಿಲೆದ್ದವು.
ಜನಾಷ್ಟಮಿ ಆಚರಣೆಗಳು ಅಥವಾ ಕನ್ವರ್ ಯಾತ್ರೆ ನಡೆಯಲು ಬಿಡುತ್ತಿರಲಿಲ್ಲ. ಸಂಕ್ಷಿಪ್ತವಾಗಿ ಹೇಳುವುದಾದರೆ, ಆಗ ನಂಬಿಕೆಯ ವಿಷಯಗಳ ಮೇಲೆ ದಾಳಿ ಮಾಡುತ್ತಿದ್ದವರು ಈಗ ಆ ನಂಬಿಕೆಯ ಶ್ರೇಷ್ಠ ಪ್ರತಿಪಾದಕರು ಎಂದು ಬಿಂಬಿಸಿಕೊಳ್ಳುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಮತ್ತು ಕ್ಷೇತ್ರದ ಆಡಳಿತವನ್ನು ವಹಿಸಿಕೊಳ್ಳುವವರೆಗೂ ಗೋರಖ್‌ಪುರ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದಲ್ಲಿ ಯಾರೂ ಹೂಡಿಕೆ ಮಾಡಲು ಸಿದ್ಧರಿರಲಿಲ್ಲ. ರಾಜ್ಯದಲ್ಲಿ 29 ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲು ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರಗಳನ್ನು ಸಹ ದೂಷಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…