Featured

ರಾಮಮಂದಿರ ನಿರ್ಮಾಣ ಬಿಜೆಪಿಯ ಆದ್ಯ ಕರ್ತವ್ಯವಾಗಿದೆ: ಅಮಿತ್ ಶಾ

ನವದೆಹಲಿ:ನಿಗದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯ ಆದ್ಯತೆ. ಅದಕ್ಕಾಗಿ ನಾವು ಕಟಿಬದ್ಧರಾಗಿದ್ದೇವೆ. ಆದರೆ ಇದಕ್ಕೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗುಡುಗಿದ್ದಾರೆ. ರಾಮ ಲೀಲಾ ಮೈದಾನದಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಕಾಂಗ್ರೆಸ್ ವಿರುದ್ಧ ಉಳಿದ ಪಕ್ಷಗಳು ಒಟ್ಟಾಗಿ ಹೋರಾಡುತ್ತಿದ್ದವು. ಈಗ ಬಿಜೆಪಿ ವಿರುದ್ಧ ಎಲ್ಲ ಪಕ್ಷಗಳು ಒಂದಾಗಿವೆ. ಆದರೆ ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಅಸಾಧ್ಯ ಎಂದು ಅಮಿತ್ ಷಾ ಹೇಳಿದರು. ಪ್ರಧಾನಿ ಮೋದಿ ಕಾರ್ಯಕಾರಿಣಿ ಉದ್ಘಾಟಿಸಿದರು. ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಗೃಹ ಸಚಿವ ರಾಜನಾಥ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹಿತ ಹಲವು ಸಚಿವರು, ಮುಖಂಡರು, ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದರು.

ನ್ಯಾಯಾಂಗ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಯೋಧ್ಯೆಯಲ್ಲಿಯೇ ಆದಷ್ಟು ಬೇಗ ರಾಮಮಂದಿರ ನಿರ್ಮಿಸಲಾಗುವುದು ಎಂದು ಪುನರುಚ್ಚರಿಸಿದ ಅಮಿತ್ ಶಾ, ಮೇಲ್ವರ್ಗದ ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಒದಗಿಸುವ ಶೇ, 10 ರಷ್ಟು ಮೀಸಲಾತಿ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ತೆರಿಗೆಯಲ್ಲಿ ವಿನಾಯಿತಿ, ಮೋದಿ ಸರ್ಕಾರದ ಅಭಿವೃದ್ಧಿ ಸಾಧನೆಗಳ ಬಗ್ಗೆ ಮಾತನಾಡಿದರು.

ಲೋಕಸಭಾ ಚುನಾವಣೆ ಎದುರಿಸುವ ಘೋಷವಾಕ್ಯವನ್ನು ಕಾರ್ಯಕಾರಿಣಿಯಲ್ಲಿ ಮೊಳಗಿಸಲಾಯಿತು. ಅಬ್ ಕೀ ಬಾರ್ ಫಿರ್ ಮೋದಿ ಸರ್ಕಾರ್ (ಈ ಬಾರಿ ಮತ್ತೊಮ್ಮೆ ಮೋದಿ ಸರ್ಕಾರ) ಎಂದು ಸಭೆಯಲ್ಲಿ ಒಕ್ಕೊರಲಿನ ಧ್ವನಿ ಕೇಳಿತು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago