Featured

ರಾಮಮಂದಿರ ಭಾರತದ ರಾಷ್ಟ್ರೀಯ ದೇವಾಲಯವಾಗಲಿದೆ : ಯೋಗಿ ಆದಿತ್ಯನಾಥ್ – Vishwnaews24

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶಿಲಾನ್ಯಾಸ ನೆರವೇರಿಸಿದ ಮುಖ್ಯಮಂತ್ರಿ ಯೋಗಿ

ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಅಭಿಜಿತ್ ಮುಹೂರ್ತ, ಮೃಗಶಿರ ನಕ್ಷತ್ರ, ಆನಂದ ಯೋಗದಲ್ಲಿ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಿದರು.

ಶಿಲಾನ್ಯಾಸದ ಬಳಿಕ ಮಾತನಾಡಿದ ಯುಪಿ ಸಿಎಂ, ರಾಮಮಂದಿರ ಭಾರತದ ರಾಷ್ಟ್ರೀಯ ದೇವಾಲಯವಾಗಲಿದೆ. ಜನರು ಈ ದಿನಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದರು. ಈ ರಾಮಮಂದಿರ ಭಾರತದ ಏಕತೆಯ ಸಂಕೇತವಾಗಲಿದೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ 2 ವರ್ಷಗಳ ಹಿಂದೆ ಪ್ರಾರಂಭಿಸಿದರು. ನಿರ್ಮಾಣಕಾರ್ಯ ಯಶಸ್ವಿಯಾಗಿ ಮುಂದುವರಿಯುತ್ತಿದ್ದು, ಇಂದು ಗರ್ಭಗುಡಿಯಲ್ಲಿ ಶಿಲಾರಾಧನೆ ನಡೆಸುತ್ತಿರುವುದು ನಮ್ಮ ಅದೃಷ್ಟ ಎಂದು ಯೋಗಿ ನುಡಿದರು.

ಗರ್ಭಗುಡಿ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ರಾಮಮಾರ್ಚ, ದುರ್ಗಾ ಸಪ್ತಶತಿ, ರುದ್ರಾಭಿಷೇಕ, ರಾಮರಕ್ಷಾ ಸ್ತೋತ್ರ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸ, ಸುಂದರಕಾಂಡ ಪಾರಾಯಣ ನಡೆಯಿತು.

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಅವರು ಗರ್ಭಗುಡಿಗಾಗಿ ಕೆತ್ತಿದ ಮೊದಲ ಶಿಲೆಯನ್ನು ಇಟ್ಟು, ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಟ್ಟರು. ರಾಮಮಂದಿರದ ಗರ್ಭಗುಡಿ 2023ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ದೇವಾಲಯದ ಉಸ್ತುವಾರಿ ವಹಿಸಿರುವ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago