ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ, ದ.ಕ. ಜಿಲ್ಲೆಗಳಲ್ಲಿ ಆ.6ರ ವರೆಗೆ ಮದ್ಯ ಮಾರಾಟ ನಿಷೇಧ -Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಉಡುಪಿ,: ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6ರ ಬೆಳಿಗ್ಗೆ 6 ಗಂಟೆಯ ತನಕ ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.

ದ.ಕ. ಜಿಲ್ಲೆಯಲ್ಲೂ ಕೂಡ ಇದೇ ಸಮಯದಲ್ಲಿ ಮದ್ಯ ಮಾರಾಟ ನಿಷೇಧಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಉಭಯ ಜಿಲ್ಲೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.