ಉಡುಪಿ

ರಾಮಮಂದಿರ ವಿಚಾರದಲ್ಲಿ ಪಕ್ಷ ಕೈಗೊಂಡ ನಿಲುವಿನಿಂದ ಬೇಸರಗೊಂಡು ಗುಜರಾತ್ ನ ಹಿರಿಯ ಕಾಂಗ್ರೆಸ್ ಶಾಸಕ ರಾಜೀನಾಮೆ – vishwanews24

ರಾಮಮಂದಿರ ವಿಚಾರದಲ್ಲಿ ಪಕ್ಷ ಕೈಗೊಂಡ ನಿಲುವಿನಿಂದ ಬೇಸರಗೊಂಡು ಗುಜರಾತ್ ನ ಹಿರಿಯ ಕಾಂಗ್ರೆಸ್ ಶಾಸಕ ರಾಜೀನಾಮೆ

ಗಾಂಧಿನಗರ: ಅಯೋಧ್ಯೆ ರಾಮ ಮಂದಿರ ವಿಚಾರದಲ್ಲಿ ಪಕ್ಷ ಕೈಗೊಂಡ ನಿಲುವಿನಿಂದ ಬೇಸರಗೊಂಡ ಗುಜರಾತ್ ನ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಚಾವಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಶಾಸಕ ಚಾವಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ತಮ್ಮ ರಾಜೀನಾಮೆ ನೀಡಿದರು.

ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಚಾವಡಾ, ನಾನು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ್ದೇನೆ, ನಾನು 25 ವರ್ಷಗಳಿಂದ ಕಾಂಗ್ರೆಸ್‌ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷಪಡುತ್ತಿದ್ದಾರೆ. ಜನರಲ್ಲಿ ಸಂತಸದ ಅಲೆಯಿದೆ, ಆ ಸಂತೋಷದ ಅಲೆಯ ಭಾಗವಾಗದೆ, ಈ ಪಕ್ಷ (ಕಾಂಗ್ರೆಸ್) ತೋರಿದ ವಿಧಾನವೇ ಅಸಮಾಧಾನಕ್ಕೆ ಕಾರಣವಾಗಿದೆ” ಎಂದಿದ್ದಾರೆ.

“ಗುಜರಾತ್ ನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್‌ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ” ಎಂದು ಅವರು ಹೇಳಿದರು.

ಚಾವಡಾ ಅವರ ನಿರ್ಗಮನದೊಂದಿಗೆ, 182 ಸದಸ್ಯರ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಈಗ 15 ಸದಸ್ಯಬಲಕ್ಕೆ ಕುಸಿದಿದೆ. ಇದಕ್ಕೂ ಮೊದಲು, ಆನಂದ್ ಜಿಲ್ಲೆಯ ಖಂಭತ್‌ ನ ಕಾಂಗ್ರೆಸ್ ಶಾಸಕ ಚಿರಾಗ್ ಪಟೇಲ್ ಕೂಡ ವಿಧಾನಸಭೆಗೆ ರಾಜೀನಾಮೆ ನೀಡಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago