ಬೆಂಗಳೂರು: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಕಾಂಗ್ರೆಸ್ ಸಾಧನಾ ಸಮಾವೇಶದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್‌ನ ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿ. ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಅನ್ನುವ ರೀತಿ ಸತಾಯಿಸ್ತಿದ್ದಾರೆ” ಎಂದು ಹೇಳಿದರು.
“ರಾಜ್ಯವನ್ನು ಸಿದ್ದರಾಮಯ್ಯ ಕುಡುಕರ ರಾಜ್ಯ ಮಾಡ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಲಾಗ್ತಿದೆ. ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ಸಾವಿರ ಸುಳ್ಳು ಹೇಳಿ ನಾಡಿನ ಜನರಿಗೆ ಅನ್ಯಾಯ ಎಸಗಿದ್ದಾರೆ. ಅಹಿಂದ ಹೆಸರಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ, ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:
“ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ, ಅಬಕಾರಿ, ಸ್ಮಾರ್ಟ್ ಮೀಟರ್ ಹಗರಣ, ಗೃಹಲಕ್ಷ್ಮಿ ಹಗರಣ, ಮುಡಾ ಹಗರಣಗಳನ್ನು ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 5 ಸಾವಿರ ಕೋಟಿ ರೂ. ಎಲ್ಲಿಗೆ ಹೋಗಿದೆ ಅಂತ ಸಿಎಂ ಇನ್ನೂ ಉತ್ತರ ಕೊಟ್ಟಿಲ್ಲ. ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಗ್ಯಾರಂಟಿಗಳಿಂದ ಜನರ ಸಬಲೀಕರಣ ಆಗಿದೆ ಅಂತ ಬಡಾಯಿ ಕೊಚ್ಚಿ ಕೊಳ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಇವರ ಸಾಧನೆ ಅಂದ್ರೆ ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ಕೊಟ್ಟಿರೋದು. ಈ ಕಾಂಗ್ರೆಸ್ ಸರ್ಕಾರ ಕಳೆದ ಎರಡೂಮುಕ್ಕಾಲು ವರ್ಷದಲ್ಲಿ ಓಲೈಕೆ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡ್ತಿದೆ. ಅಭಿವೃದ್ಧಿ ದೂರದೃಷ್ಟಿ ಇಲ್ಲದೇ 25 ವರ್ಷ ಹಿಂದಕ್ಕೆ ರಾಜ್ಯ ಹೋಗಿದೆ” ಎಂದರು.
ಇದನ್ನೂ ಓದಿ:
“ಕಾಂಗ್ರೆಸ್‌ನವರು ವೈಫಲ್ಯ, ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಎಲ್ಲ ವರ್ಗದ ಜನರಿಗೆ ಘೋರ ಅನ್ಯಾಯ ಮಾಡಿದೆ. ಇಲಾಖೆಗಳಿಗೆ ಕೇಂದ್ರದ ವಿಶೇಷ ಅನುದಾನ ಕೊಟ್ಟೇ ಇಲ್ಲ. ಅನುದಾನ ಕೊಡದಿದ್ರೂ ಆ ಇಲಾಖೆಗಳ ಮೇಲೆ ಒತ್ತಾಯ ಹಾಕಿ ನಕಲಿ ಯುಟಿಲೈಸೇಷನ್ ಸರ್ಟಿಫಿಕೇಟ್ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ, ಡಿಸಿಎಂ ಉತ್ತರಿಸಬೇಕು” ಎಂದು ಆಗ್ರಹಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…