Featured

ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ : ವಿಜಯೇಂದ್ರ ಆಕ್ರೋಶ – vishwanews24

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ

ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ :ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಕಾಂಗ್ರೆಸ್‌ ಸಾಧನಾ ಸಮಾವೇಶದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್‌ನ ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿ. ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಅನ್ನುವ ರೀತಿ ಸತಾಯಿಸ್ತಿದ್ದಾರೆ” ಎಂದು ಹೇಳಿದರು.

“ರಾಜ್ಯವನ್ನು ಸಿದ್ದರಾಮಯ್ಯ ಕುಡುಕರ ರಾಜ್ಯ ಮಾಡ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಲಾಗ್ತಿದೆ. ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ಸಾವಿರ ಸುಳ್ಳು ಹೇಳಿ ನಾಡಿನ ಜನರಿಗೆ ಅನ್ಯಾಯ ಎಸಗಿದ್ದಾರೆ. ಅಹಿಂದ ಹೆಸರಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ, ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: 

“ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ, ಅಬಕಾರಿ, ಸ್ಮಾರ್ಟ್ ಮೀಟರ್ ಹಗರಣ, ಗೃಹಲಕ್ಷ್ಮಿ ಹಗರಣ, ಮುಡಾ ಹಗರಣಗಳನ್ನು ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 5 ಸಾವಿರ ಕೋಟಿ ರೂ. ಎಲ್ಲಿಗೆ ಹೋಗಿದೆ ಅಂತ ಸಿಎಂ ಇನ್ನೂ ಉತ್ತರ ಕೊಟ್ಟಿಲ್ಲ. ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗ್ಯಾರಂಟಿಗಳಿಂದ ಜನರ ಸಬಲೀಕರಣ ಆಗಿದೆ ಅಂತ ಬಡಾಯಿ ಕೊಚ್ಚಿ ಕೊಳ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಇವರ ಸಾಧನೆ ಅಂದ್ರೆ ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ಕೊಟ್ಟಿರೋದು. ಈ ಕಾಂಗ್ರೆಸ್ ಸರ್ಕಾರ ಕಳೆದ ಎರಡೂಮುಕ್ಕಾಲು ವರ್ಷದಲ್ಲಿ ಓಲೈಕೆ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡ್ತಿದೆ. ಅಭಿವೃದ್ಧಿ ದೂರದೃಷ್ಟಿ ಇಲ್ಲದೇ 25 ವರ್ಷ ಹಿಂದಕ್ಕೆ ರಾಜ್ಯ ಹೋಗಿದೆ” ಎಂದರು.

ಇದನ್ನೂ ಓದಿ: 

“ಕಾಂಗ್ರೆಸ್‌ನವರು ವೈಫಲ್ಯ, ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಎಲ್ಲ ವರ್ಗದ ಜನರಿಗೆ ಘೋರ ಅನ್ಯಾಯ ಮಾಡಿದೆ. ಇಲಾಖೆಗಳಿಗೆ ಕೇಂದ್ರದ ವಿಶೇಷ ಅನುದಾನ ಕೊಟ್ಟೇ ಇಲ್ಲ. ಅನುದಾನ ಕೊಡದಿದ್ರೂ ಆ ಇಲಾಖೆಗಳ ಮೇಲೆ ಒತ್ತಾಯ ಹಾಕಿ ನಕಲಿ ಯುಟಿಲೈಸೇಷನ್ ಸರ್ಟಿಫಿಕೇಟ್ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ, ಡಿಸಿಎಂ ಉತ್ತರಿಸಬೇಕು” ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago