ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಶಂಕಿತ ಉಗ್ರನ ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ (CCB) ಪೊಲೀಸರು ಬಾಂಬರ್‌ನ ಮತ್ತೊಂದು ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.
ಸಿಸಿಟಿವಿಯಲ್ಲಿ ಬಾಂಬರ್ ದೃಶ್ಯ ಸಮರ್ಪಕವಾಗಿ ಸೆರೆಯಾಗದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದರು. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವನ್ನು ಆಧಾರವಾಗಿ ಇಟ್ಟುಕೊಂಡು ಸಿಸಿಬಿ ಶಂಕಿತ ಉಗ್ರನ ರೇಖಾಚಿತ್ರ ತಯಾರಿ ಮಾಡಿದೆ. ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ಕರೆಗಳು ಬಂದಿವೆ. ಆರೋಪಿಯನ್ನು ನೋಡಿದ್ದಾಗಿ ಕರೆಗಳು ಬರುತ್ತಿದ್ದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿಸಿಬಿ ತಯಾರಿ ನಡೆಸಿತ್ತು.
ಖ್ಯಾತ ಸ್ಕೆಚ್ ಆರ್ಟಿಸ್ಟ್‌ನಿಂದ ಬಾಂಬರ್‌ನ ಇಮ್ಯಾಜಿನರಿ ಸ್ಕೆಚ್ ಬಿಡಿಸಲಾಗಿದೆ. ಸ್ಕೆಚ್ ಆರ್ಟಿಸ್ಟ್ ಎನ್‌ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ಸಂಪೂರ್ಣ ಮುಖದ ಇಮ್ಯಾಜಿನರಿ ಸ್ಕೆಚ್ ಮಾಡಿದ್ದಾರೆ. ಆರ್ಟಿಸ್ಟ್ ಹರ್ಷ ಅವರು ಈ ರೇಖಾಚಿತ್ರವನ್ನು ಬಿಡಿಸಿದ್ದಾರೆ. ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ಮಾಸ್ಕ್ ಇಲ್ಲದೇ ಟೋಪಿ ಕನ್ನಡಕ ಧರಿಸಿದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದೇ ರೀತಿ ಬಾಂಬರ್ ಇರಬಹುದು ಎಂದು ಕಲ್ಪಿಸಿ ಕಲಾವಿದ ಹರ್ಷ ಈ ರೇಖಾಚಿತ್ರ ಬಿಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…