ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.
ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್‌ನನ್ನು ಎನ್‌ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ‍್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…