ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.
ಅದಲ್ಲದೆ, ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ.ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100 ತಿಳಿಸುವಂತೆ ಎನ್‌ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಗರದ ವೈಟ್‌ಫೀಲ್ಡ್ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ. ಇನ್ನು ಎನ್‌ಐಎ ತಂಡ ಈಗಾಗಲೇ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಪರಾಧ ಸ್ಥಳದ ಪರಿಶೀಲನೆ ನಡೆಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…