ರಾಮೇಶ್ವರಂ ಕೆಫೆ ಸ್ಫೋಟ : ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ : ಪರಮೇಶ್ವರ್ ವಿಶ್ವಾಸ – Vishwanews24

Featured, ರಾಜ್ಯ ನ್ಯೂಸ್

ರಾಮೇಶ್ವರಂ ಕೆಫೆ ಸ್ಫೋಟ : ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ : ಪರಮೇಶ್ವರ್  ವಿಶ್ವಾಸ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಪ್ರಕರಣ ಭೇದಿಸುವ ಭರವಸೆ ಮೂಡಿಸಿವೆ ಎಂದು ಪರಮೇಶ್ವರ್ ಅವರು ಇಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ ನಿರ್ವಾಹಕ  – Vishwanews24

ನಮ್ಮ ಅಧಿಕಾರಿಗಳು ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಅನುಮಾನದ ಆಧಾರದ ಮೇಲೆ, ಕೆಲವು ಜನರನ್ನು ಪೊಲೀಸರು ವಶಕ್ಕೆ ಪಡೆದು ಅವರಿಂದ “ಮಾಹಿತಿ” ಸಂಗ್ರಹಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಉಡುಪಿ: ಫ್ರೀ ಯೋಜನೆಗಳ ಜೊತೆ ಬಾಂಬ್ ಫ್ರೀ’ ವಿಡಿಯೋ ವೈರಲ್ ; ಗರಡಿ ಮಜಲು ದಿವಾಕರ್ ಕೋಟ್ಯಾನ್ ವಿರುದ್ಧ ಕೇಸ್‌ ದಾಖಲು – Vishwanews24

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ಅವರು ಇನ್ನೂ ಬಂದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Leave a Reply