ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಬಾಂಬರ್ ಯಾರೆಂಬುದು ಬಹುತೇಕ ಪತ್ತೆ : ಸಚಿವ ಪರಮೇಶ್ವರ್ – Vishwanews24
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಬಾಂಬರ್ ಯಾರೆಂಬುದು ಬಹುತೇಕ ಪತ್ತೆ : ಸಚಿವ ಪರಮೇಶ್ವರ್
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದಿದ್ದು, ಶಂಕಿತ ಬಾಂಬರ್ ಯಾರೆಂದು ಒಂದು ಹಂತಕ್ಕೆ ಗೊತ್ತಾಗಿದೆ. ಆದರೆ ಇದನ್ನು ದೃಢಪಡಿಸಿಕೊಳ್ಳಬೇಕಾಗಿದೆ. ಸಿಸಿಬಿ, ಎನ್ಐಎ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
